ಕೆಸಿಎನ್‌-ಕೆಬಿಸಿ ಮತ್ತೆ ಮುಖಾಮುಖಿ

  |   Mandyanews

ಮಂಡ್ಯ: ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್‌ ಚುನಾವಣಾ ಅರ್ಹತೆ ಘೋಷಿಸುತ್ತಿದ್ದಂತೆ ಕೆ.ಆರ್‌.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮೂರೂ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿವೆ.

ಚುನಾವಣೆಗೆ ಸ್ಪರ್ಧಿಸಲು ಸುಪ್ರೀಂ ಗ್ರೀನ್‌ ಸಿಗ್ನಲ್‌ ಕೊಟ್ಟ ಬೆನ್ನಲ್ಲೇ ಕೇಸರಿ ಪಾಳಯಕ್ಕೆ ಜಾರಿದ ಕೆ.ಸಿ.ನಾರಾಯಣಗೌಡರು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆಯಾದರು. ನಂತರದಲ್ಲಿ ದೇವೇಗೌಡರ ಮಾನಸಪುತ್ರರೆಂದೇ ಗುರುತಿಸಲ್ಪಟ್ಟಿರುವ ಜಿಪಂ ಸದಸ್ಯ ಬಿ.ಎಲ್‌.ದೇವರಾಜು ಅವರನ್ನು ಜೆಡಿಎಸ್‌ ತನ್ನ ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದರೆ, ಸಂಜೆಯ ವೇಳೆಗೆ ಕಾಂಗ್ರೆಸ್‌ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಅವರಿಗೆ ಮತ್ತೆ ಟಿಕೆಟ್‌ ನೀಡಿ ಕಣಕ್ಕಿಳಿಸಿದೆ.

ಎರಡು ಚುನಾವಣೆಯಲ್ಲಿ ಸೋಲು: 2012 ಹಾಗೂ 2018ರ ವಿಧಾನಸಭಾ ಚುನಾವಣೆಗಳಲ್ಲಿ ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಆ ವೇಳೆ ಕಾಂಗ್ರೆಸ್‌ನಿಂದ ಕೆ.ಬಿ.ಚಂದ್ರಶೇಖರ್‌ ಹಾಗೂ ಜೆಡಿಎಸ್‌ನಿಂದ ಕೆ.ಸಿ.ನಾರಾಯಣಗೌಡರು ಮುಖಾಮುಖೀಯಾಗಿ ಸೆಣಸಾಟ ನಡೆಸಿದ್ದರು. ಈಗ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಇಬ್ಬರೂ ನಾಯಕರ ನಡುವೆ ಮತ್ತೆ ನೇರ ಕದನ ಏರ್ಪಟ್ಟಿದೆ. ಹಿಂದಿನ ಚುನಾವಣೆಗಳಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಕೆ.ಸಿ.ನಾರಾಯಣ ಗೌಡರು ಬಿಜೆಪಿ ಅಭ್ಯರ್ಥಿಯಾಗಿ ಅಖಾಡ ದಲ್ಲಿರುವುದು ಈ ಬಾರಿಯ ವಿಶೇಷವಾಗಿದೆ....

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/hofCMwAA

📲 Get Mandya News on Whatsapp 💬