ಗ್ರಾಮ ಮಟ್ಟದಿಂದ ಪಕ್ಷ ಸಂಘಟನೆಗೆ ಶ್ರಮಿಸಿ

  |   Bidarnews

ಬಸವಕಲ್ಯಾಣ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರು ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, "ಸಬಕಾ ಸಾಥ್‌ ಸಬಕಾ ವಿಕಾಸ್‌' ಎಂಬ ವಾಕ್ಯದೊಂದಿಗೆ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು.

ನಗರದ ಅಡತ್‌ ಬಜಾರ್‌ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಬಿಜೆಪಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಇಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳನ್ನು ಬಿಟ್ಟು ಸಾಕಷ್ಟು ಜನ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಹೀಗಾಗಿ ದೇಶದಲ್ಲಿ ಇನ್ನೂ ಬಿಜೆಪಿಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಿಂದ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಬಿಜೆಪಿ ಕಾರ್ಯರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಬೇಡ. ಎಲ್ಲರು ನಮ್ಮವರೇ ಎಂದು ತಿಳಿದುಕೊಂಡಾಗ ಮಾತ್ರ ಪಕ್ಷ ಬೆಳೆಯಲು ಸಾಧ್ಯವಾಗುತ್ತದೆ. ಅಲ್ಲದೆ ಪಕ್ಷದಲ್ಲಿ ಯಾರು ಪ್ರಾಮಾಣಿಕತೆಯಿಂದ ದುಡಿಯುತ್ತಿದ್ದಾರೊ ಅಂಥವರಿಗೆ ಮಾತ್ರ ಪಕ್ಷದಲ್ಲಿ ಮತ್ತು ಚುನಾವಣೆಯಲ್ಲಿ ಅವಕಾಶ ಸಿಗಬೇಕು ಎಂದರು....

ಫೋಟೋ - http://v.duta.us/tdZ1cgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/pOHVUgAA

📲 Get Bidar News on Whatsapp 💬