ನೀತಿ ಸಂಹಿತೆ; ಪೇಡ್‌ನ್ಯೂಸ್ ಮೇಲೆ ಹದ್ದಿನ ಕಣು

  |   Bellarynews

ಬಳ್ಳಾರಿ: ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಈಗಾಗಲೇ ನೀತಿಸಂಹಿತೆ ಜಾರಿಯಾಗಿದ್ದು, ಮಾಧ್ಯಮಗಳ ನೀತಿ ಸಂಹಿತೆ ಉಲ್ಲಂಘನೆ, ಪೇಡ್‌ ನ್ಯೂಸ್‌ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದು ಎಂಸಿಎಂಸಿ ನೋಡಲ್‌ ಅಧಿಕಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಹೇಳಿದರು.

ನಗರದ ವಾರ್ತಾಭವನದಲ್ಲಿ ಎಂಸಿಎಂಸಿ ಸಮಿತಿ ಸದಸ್ಯರಿಗೆ ಹಾಗೂ ಮಾಧ್ಯಮ ಕಣ್ಗಾವಲು ಸಿಬ್ಬಂದಿಗೆ ಗುರುವಾರ ಆಯೋಜಿಸಿದ್ದ ಎಂಸಿಎಂಸಿ ಸಮಿತಿ ಕಾರ್ಯವೈಖರಿ ಕುರಿತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣೆ ಆಯೋಗ ಈಗಾಗಲೇ ಸಕಲ ಕ್ರಮಗಳನ್ನು ಕೈಗೊಂಡಿದೆ. ಅದರ ಸೂಚನೆ ಅನ್ವಯ ಬಳ್ಳಾರಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ಮಾಧ್ಯಮ ಕಣ್ಗಾವಲು ಮತ್ತು ಮಾಧ್ಯಮ ಪ್ರಮಾಣೀಕರಣ ಸಮಿತಿ ರಚಿಸಲಾಗಿದೆ. "ಪೇಡ್‌ ನ್ಯೂಸ್‌" ತಡೆಗಟ್ಟಲು, ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಮಾಧ್ಯಮ ಸಂಬಂಧಿತ ಅರ್ಜಿಗಳು, ಅನುಮತಿಗಳನ್ನು ಸರಾಗವಾಗಿ ನೀಡುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ, ಕೇಬಲ್‌ ವಾಹಿನಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು....

ಫೋಟೋ - http://v.duta.us/8nYPogAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/8NZYSAAA

📲 Get Bellary News on Whatsapp 💬