ಪಕ್ಷೇತರರ ಸೆಳೆಯಲು ಕಸರತ್ತು

  |   Davanagerenews

„ಎನ್‌.ಆರ್‌.ನಟರಾಜ್‌

ದಾವಣಗೆರೆ: ಈ ಬಾರಿಯ ಮಹಾನಗರಪಾಲಿಕೆ ಚುನಾವಣೆಯಲ್ಲಿ ದಾವಣಗೆರೆ ನಗರದ ಮತದಾರರು ಯಾರಿಗೂ ಸ್ಪಷ್ಟ ಒಲವು ವ್ಯಕ್ತಪಡಿಸಿಲ್ಲ. ಒಂದು ರೀತಿ ಅತಂತ್ರ ಫಲಿತಾಂಶ ಹೊರಹೊಮ್ಮಿರುವುದರಿಂದ ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಪಕ್ಷಗಳು ತಮ್ಮ ಗೆಲುವಿನಿಂದ ಬೀಗುವ ಸ್ಥಿತಿಯಲ್ಲಿಲ್ಲ.

ಈ ಬಾರಿ ಚುನಾವಣೆಯಲ್ಲಿ ನಮ್ಮ ಪಕ್ಷವೇ ಅಧಿಕ ಸ್ಥಾನಗಳಿಸಲಿದೆ ಎಂಬುದಾಗಿ ಜೋರಾಗಿ ಹೇಳುತ್ತಿದ್ದ ಉಭಯ ಪಕ್ಷಗಳ ಮುಖಂಡರಿಗೂ ಒಂದು ರೀತಿ ಮುಜುಗರ ಉಂಟಾಗಿದೆ. ಮತ್ತೆ ಅಧಿಕಾರದ ಗದ್ದುಗೆ ಏರುವ ಹುಮ್ಮಸ್ಸಿನಲ್ಲಿದ್ದ ಕಾಂಗ್ರೆಸ್‌ ಹಾಗೂ ಕೈ ಪಡೆಯಿಂದ ಅಧಿಕಾರ ಕಸಿದುಕೊಳ್ಳುವ ಪಣತೊಟ್ಟಿದ್ದ ಬಿಜೆಪಿ ಮುಂದೇನು ಎಂಬ ಲೆಕ್ಕಾಚಾರದಲ್ಲಿ ತೊಡಗುವಂತಾಗಿದೆ.

ದಾವಣಗೆರೆ ಮಹಾನಗರಪಾಲಿಕೆಯ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು ಅಗತ್ಯ ಇರುವ ಮ್ಯಾಜಿಕ್‌ ನಂಬರ್‌ ಯಾವ ಪಕ್ಷಕ್ಕೂ ದಕ್ಕಿಲ್ಲ. 45 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 22 ಹಾಗೂ ಬಿಜೆಪಿ 17 ವಾರ್ಡ್‌ಗಳಲ್ಲಿ ಜಯ ಸಾಧಿಸಿವೆ. ಜೆಡಿಎಸ್‌ ಈ ಬಾರಿ ಒಂದು ವಾರ್ಡ್‌ನಲ್ಲಿ ಗೆಲ್ಲುವ ಮೂಲಕ ಖಾತೆ ತೆರೆದಿದೆ.

ಪಾಲಿಕೆಯಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್‌ ಈ ಚುನಾವಣೆಯಲ್ಲಿ 22 ವಾರ್ಡ್‌ಗಳಲ್ಲಿ ಜಯ ಗಳಿಸುವ ಮೂಲಕ ಹೆಚ್ಚು ಸ್ಥಾನ ಪಡೆದ ಪಕ್ಷವಾಗಿ ಹೊರಹೊಮ್ಮಿದ್ದರೂ ಮ್ಯಾಜಿಕ್‌ ನಂಬರ್‌ 23 ಸಂಖ್ಯೆ ಪಡೆಯುವಲ್ಲಿ ವಿಫಲವಾಗಿದೆ. ಕಳೆದ ಬಾರಿ 41 ಸದಸ್ಯ ಬಲದ ಪಾಲಿಕೆಯಲ್ಲಿ 39 ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್‌ ಈ ಬಾರಿಯೂ ಅಧಿಕ ಸ್ಥಾನ ಪಡೆಯಲಿದ್ದೇವೆ ಎಂಬ ಅತೀ ವಿಶ್ವಾಸದಲ್ಲಿತ್ತು....

ಫೋಟೋ - http://v.duta.us/Xe46rgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/zqfzjwAA

📲 Get Davanagere News on Whatsapp 💬