ಪಠ್ಯದೊಂದಿಗೆ ಮಕ್ಕಳಿಗೆ ಭತ್ತದ ಬೇಸಾಯ

  |   Dakshina-Kannadanews

ಕಡಬ: ಕೃಷಿ ಸಂಸ್ಕೃತಿಯಿಂದ ಯುವ ಸಮುದಾಯ ದೂರ ಸರಿಯುತ್ತಿರುವ ಕಾಲಘಟ್ಟದಲ್ಲಿ ಕಡಬದ ಸರಸ್ವತೀ ವಿದ್ಯಾಲಯ ಸಮೂಹ ಶಿಕ್ಷಣ ಸಂಸ್ಥೆಯು ಭತ್ತದ ಕೃಷಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ವಿಶಿಷ್ಟ ಪ್ರಯತ್ನ ನಡೆಸುತ್ತಿದೆ.

ಇದು ಕೇವಲ ನೇಜಿ ನೆಡುವ ಕೆಲಸದ ಪ್ರಾತ್ಯಕ್ಷಿಕೆಗೆ ಸೀಮಿತವಾಗಿರದೆ ನೇಜಿ ನಾಟಿಯಿಂದ ಹಿಡಿದು ಭತ್ತದ ಕೊcಲಿನ ತನಕ ಭತ್ತದ ಕೃಷಿಯ ಪೂರ್ಣ ಪ್ರಕ್ರಿಯೆಯನ್ನು ವಿದ್ಯಾರ್ಥಿಗಳೇ ನಿರ್ವಹಿಸುತ್ತಿದ್ದಾರೆ. ಕೈ ಕೆಸರಾದರೆ ಬಾಯಿ ಮೊಸರು "ಸಂಸ್ಕಾರದೊಂದಿಗೆ ಶಿಕ್ಷಣ' ಎನ್ನುವ ಧ್ಯೇಯದೊಂದಿಗೆ ಆರಂಭಗೊಂಡಿರುವ ಕಡಬದ ಸರಸ್ವತೀ ಸಮೂಹ ಶಿಕ್ಷಣ ಸಂಸ್ಥೆ ಕಡಬದ ಪಂಜ ರಸ್ತೆಯಲ್ಲಿರುವ ವಿದ್ಯಾನಗರ ಹಾಗೂ ಕೇವಳದ ಹನುಮಾನ್‌ ನಗರದಲ್ಲಿ ಕಾರ್ಯಾಚರಿಸುತ್ತಿದೆ. ವಿದ್ಯಾನಗರದಲ್ಲಿ ಪ್ರಾಥಮಿಕ ಶಾಲೆ, ಶಿಶುಮಂದಿರ ಹಾಗೂ ಹನುಮಾನ್‌ನಗರದಲ್ಲಿ ಪ್ರೌಢಶಾಲೆ ಮತ್ತು ಪ.ಪೂ. ವಿದ್ಯಾಲಯವಿದೆ. ಸುಮಾರು 700 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸಂಸ್ಥೆಯಲ್ಲಿ ಈ ವರ್ಷದಿಂದ ತಮ್ಮ ಮಧ್ಯಾಹ್ನದ ಉಚಿತ ಬಿಸಿಯೂಟಕ್ಕೆ ವಿದ್ಯಾರ್ಥಿಗಳೇ ಉತ್ತು, ಬಿತ್ತಿ, ಬೆಳೆ ತೆಗೆದು ಅಕ್ಕಿ ತಯಾರಿಸುವ ಯೋಜನೆ ರೂಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಕೃಷಿಯತ್ತ ಒಲವು ಮೂಡಿಸುವುದು, ರೈತರ ಕಷ್ಟದ ಬಗ್ಗೆ ಅರಿವು ಮೂಡಿಸುವುದು, ಕೈ ಕೆಸರಾದರೆ ಬಾಯಿ ಮೊಸರು ಎನ್ನುವ ನಾಣ್ಣುಡಿಯನ್ನು ಅರ್ಥೈಸುವ ಉದ್ದೇಶ ಈ ಯೋಜನೆಯಲ್ಲಿ ಅಡಕವಾಗಿದೆ....

ಫೋಟೋ - http://v.duta.us/7OtBEwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/uBgWNwAA

📲 Get Dakshina Kannada News on Whatsapp 💬