ಪಾಲಿಕೆಗಾದಿ ಯಾರಿಗೆ?

  |   Davanagerenews

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 45 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 22 ವಾರ್ಡ್‌ಗಳಲ್ಲಿ ಜಯಗಳಿಸುವ ಮೂಲಕ ಸತತ ಎರಡನೇ ಬಾರಿಗೆ ಅಧಿಕಾರ ಹಿಡಿಯುವ ಪ್ರಯತ್ನದಲ್ಲಿದೆ. ಮಂಗಳವಾರ ನಡೆದ 45 ವಾರ್ಡ್‌ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 45 ವಾರ್ಡ್‌, ಕಾಂಗ್ರೆಸ್‌ 44(45ನೇ ವಾರ್ಡ್‌ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡ ಕಾರಣ), ಜೆಡಿಎಸ್‌ 23, ಸಿಪಿಐ 6, ಬಿಎಸ್ಪಿ 3, ಕೆಪಿಜೆಪಿ 2, ಸೂಸಿ 1 ಹಾಗೂ 84 ಪಕ್ಷೇತರರು ಕಣದಲ್ಲಿದ್ದರು.

ಕಾಂಗ್ರೆಸ್‌ 22, ಬಿಜೆಪಿ 17, ಜೆಡಿಎಸ್‌ 1 ಹಾಗೂ 5 ವಾರ್ಡ್‌ಗಳಲ್ಲಿ ಪಕ್ಷೇತರರು ಜಯಗಳಿಸಿದ್ದಾರೆ. ಎರಡನೇ ಬಾರಿಗೆ ಮಹಾನಗರ ಪಾಲಿಕೆಯ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ತೀವ್ರ ಪೈಪೋಟಿ ನಡೆಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಪ್ರಚಾರದ ನೇತೃತ್ವ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾ ಚಾರ್ಯ, ಸಂಸದ ಜಿ.ಎಂ. ಸಿದ್ದೇಶ್ವರ್‌. ಶಾಸಕರಾದ ರವೀಂದ್ರನಾಥ್‌, ಎಸ್‌.ವಿ. ರಾಮಚಂದ್ರ, ಮಾಡಾಳ್‌ ವಿರುಪಾಕ್ಷಪ್ಪ, ಪ್ರೊ| ಲಿಂಗಣ್ಣ, ನೆಹರು ಚ. ಓಲೇಕಾರ್‌ ಇತರರು ಪ್ರಚಾರ ಕೈಗೊಂಡಿದ್ದರೂ ಬಿಜೆಪಿ ನಿರೀಕ್ಷಿತ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ. ಕಾರಣ ಟಿಕೆಟ್‌ ಹಂಚಿಕೆಯಲ್ಲಿನ ಗೊಂದಲ, ಬಂಡಾಯದ ಬಿಸಿ. ಆದರೂ, ಕಳೆದ ಚುನಾವಣೆಯಲ್ಲಿ ಕೇವಲ ಒಂದು ವಾರ್ಡ್‌ನಲ್ಲಿ ಗೆದ್ದಿದ್ದಂತಹ ಬಿಜೆಪಿ 17 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ....

ಫೋಟೋ - http://v.duta.us/YI4THgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/fiqVeAEA

📲 Get Davanagere News on Whatsapp 💬