ಮಕ್ಕಳ ಸಾಗಾಟ ತಡೆಯಲು ಸಹಕರಿಸಿ

  |   Yadgirinews

ಸುರಪುರ: ಸಮಾಜದಲ್ಲಿ ಮಕ್ಕಳ ಮೇಲೆ ಹಲ್ಲೆ, ದೌರ್ಜನ್ಯ ಲೈಂಗಿಕ ಕಿರುಕುಳ, ಕಳ್ಳ ಸಾಗಾಟ ಅವ್ಯಾಹತವಾಗಿ ನಡೆದಿವೆ. ಇದನ್ನು ತಡೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಈ ದಿಸೆಯಲ್ಲಿ ಸಾರ್ವಜನಿಕರು ಕಾನೂನಿನೊಂದಿಗೆ ಸಹಕರಿಸಬೇಕು ಎಂದು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶೆ ತಯ್ಯಬಾ ಸುಲ್ತಾನಾ ಹೇಳಿದರು.

ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕನೂನು ಸೇವಾ ಸಮಿತಿ, ವಕೀಲರ ಸಂಘ, ಸಿಡಿಪಿಒ ಸೇರಿದಂತೆ ಇತರೆ ಇಲಾಖೆಗಳ ಸಹಯೋಗದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಕ್ಕಳ ದಿನಾಚರಣೆ ಹಾಗೂ ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಕಾನೂನಿನ ನೆರವು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳನ್ನು ಕದ್ದು ದೊಡ್ಡ ದೊಡ್ಡ ನಗರಗಳಿಗೆ ಸಾಗಿಸಲಾಗುತ್ತಿದೆ. ಕರೆದೊಯ್ದು ಮಕ್ಕಳನ್ನು ಮಾರಾಟ ಮಾಡಲಾಗುತ್ತಿದೆ. ಕೆಲ ಗುಂಪುಗಳು ಆ ಮಕ್ಕಳನ್ನು ಬೇರೆ ಬೇರೆ ವೃತ್ತಿಗಳಲ್ಲಿ ತೊಡಗಿಸಿಕೊಂಡು ಹಣ ಸಂಪಾದಿಸುವ ದಂಧೆಗೆ ಇಳಿದಿವೆ. ಇದನ್ನು ತಡೆಯಲು ಎಂದು ಹೇಳಿದರು. ತಪ್ಪು ಮಾಡುವವರಿಗೆ ಕಾನೂನಿನ ಅರಿವು ಇರುವುದಿಲ್ಲ. ಕಾನೂನಿನ ಜ್ಞಾನ ಅವಶ್ಯಕವಾಗಿದೆ. ಇತ್ತೀಚೆಗೆ ದೇಶ ಸೇರಿದಂತೆ ರಾಜ್ಯದಲ್ಲಿ ಮಕ್ಕಳ ಮೇಲಿನ ದಬ್ಟಾಳಿಕೆ ಹೆಚ್ಚಾಗುತ್ತಿರುವ ಪ್ರಕರಣ ಕಾಣಬಹುದು. ಮಕ್ಕಳಿಗೆ ಕಿರುಕುಳ ನೀಡುವುದು ಕಾನೂನು ಪ್ರಕಾರ ಅಪರಾಧ. ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಕೆಲಸವಾಗಬೇಕು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾದಲ್ಲಿ ಪೋಷಕರಿಗೆ ತಿಳಿಸಬೇಕು. ಪೋಷಕರು ಪೊಲೀಸರಿಗೆ ಮಾಹಿತಿ ನೀಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಮೊಬೈಲ್‌ ಎಷ್ಟು ಪ್ರಯೋಜನಕಾರಿಯೋ ಅಷ್ಟೇ ಅಪಾಯಕಾರಿ. ಅಗತ್ಯಕ್ಕೆ ತಕ್ಕಷ್ಟು ಬಳಸಬೇಕು. ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಓದಿ ಯಶಸ್ಸು ಪಡೆಯಬೇಕು ಎಂದು ಹೇಳಿದರು....

ಫೋಟೋ - http://v.duta.us/QFbTsgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/Q_J13gAA

📲 Get Yadgiri News on Whatsapp 💬