ಮಕ್ಕಳ ಹಕ್ಕುಗಳ ಜಾಗೃತಿ ಸಪ್ತಾಹ ಉದ್ಘಾಟನೆ

  |   Bangalore-Ruralnews

ದೊಡ್ಡಬಳ್ಳಾಪುರ; ದೇಶದಲ್ಲಿ ಇಂದಿಗೂ ಗಣನೀಯ ಸಂಖ್ಯೆಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ವರದಿಯಾಗುತ್ತಿದ್ದು, ಸಮಾಜದ ಅತ್ಯಂತ ಕೆಳಸ್ತರದಲ್ಲಿ ಒತ್ತಾಯಪೂರ್ವಕವಾಗಿ, ಕಾನೂನು ಬಾಹಿರವಾಗಿ ದುಡಿಯುತ್ತಿರುವ ಮಕ್ಕಳ ರಕ್ಷಣೆಗೂ ನೀಡಬೇಕಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಆರ್‌.ನಟೇಶ್‌ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಧಿಕಾರ, ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಇಲ್ಲಿನ ಶ್ರೀದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಮಕ್ಕಳ ದಿನಾಚರಣೆ-2019, ಚೈಲ್ಡ್ ಲೈನ್ಸೇ ದೋಸ್ತಿ ಜಿಲ್ಲಾ ಮಕ್ಕಳ ಹಕ್ಕುಗಳ ಜಾಗೃತಿ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮಕ್ಕಳ ಹಕ್ಕುಗಳ ರಕ್ಷಣೆಗೆ ಸಾಂವಿಧಾನಿಕ ನಿಯಮಾವಳಿಗಳ ಪಾಲನೆ ಅಗತ್ಯವಾಗಿದೆ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಅಸುರಕ್ಷಿತ ವಲಯದ ಮಕ್ಕಳ ರಕ್ಷಣೆ ಅತ್ಯಗತ್ಯ. ಮುಕ್ತ ಅಭಿಪ್ರಾಯಗಳ ವಿನಿಮಯ ಪ್ರಯತ್ನ ಅತ್ಯಗತ್ಯವಾಗಿದ್ದು, ಎಲ್ಲ ಮಕ್ಕಳಿಗೂ ಸಾಂವಿಧಾನಿಕವಾಗಿ ಶಿಕ್ಷಣ, ಸಾಮಾಜಿಕ ನ್ಯಾಯ, ಸಾಂಸ್ಕೃತಿಕ ಅವಕಾಶಗಳು ದೊರೆಯಬೇಕು....

ಫೋಟೋ - http://v.duta.us/F8DYLgEA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/Dr6NjQAA

📲 Get Bangalore Rural News on Whatsapp 💬