ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಕೊರತೆ ಇತ್ತು, ಹಾಗಾಗಿ ರಾಜಿನಾಮೆ ನೀಡಿದೆವು

  |   Bellarynews

ಬಳ್ಳಾರಿ: ಹಿಂದಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಯೋಜನೆ ಮಾಡಬೇಕಿತ್ತು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಈಡೇರಿಸಲಿಲ್ಲ ಎಂದು ಅನರ್ಹ ಶಾಸಕ, ವಿಜಯ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಹೇಳಿದರು.

ಜಿಲ್ಲೆಯ ಹೊಸಪೇಟೆಯಲ್ಲಿ ಶುಕ್ರವಾರ ನಡೆಸಿದ ಕಾರ್ಯಕರ್ತರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ವಿಜಯನಗರ ಕ್ಷೇತ್ರದಲ್ಲಿ ಸಾಕಷ್ಟು ಯೋಜನೆಗಳು ಮಾಡುವುದಿತ್ತು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಬೇಡಿಕೆ ಈಡೇರಿಸಲಿಲ್ಲ. ರಾಜ್ಯಾದ್ಯಂತ ಅನುದಾನ ಸಿಗಲಿಲ್ಲ. ಕೇವಲ ಸರ್ಕಾರ ಉಳಿಸೋದು ಬೀಳಿವುದೇ ಕೆಲಸವಾಯ್ತು. ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಕೊರತೆ ಇತ್ತು. ಹಾಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದೆ. ಅದನ್ನು ವೈರಲ್ ಮಾಡಿದರು. ಆ ಮಾತಿಗೆ ಬದ್ಧನಾಗಿದ್ದೇನೆ. ಬೇರೆ ಯುವಕರಿಗೆ ಅವಕಾಶ ಕೊಡಬೇಕು ಎನ್ನುವದಾಗಿದೆ. ಯಡಿಯೂರಪ್ಪ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡಿದ್ದಾರೆ. ರಾಜೀನಾಮೆ ಕೊಡುವ ಮುನ್ನ ಸಾಕಷ್ಟು ನಾಯಕರಿಗೆ ನಮ್ಮ ನೋವನ್ನು ಹೇಳಿಕೊಂಡಿದ್ದೇವೆ. ಜನರಿಗೆ ಕೊಟ್ಟ ಮಾತು ಪೂರೈಸಲು ಆಗದ ಕಾರಣ ರಾಜೀನಾಮೆ ನೀಡಿದ್ದೇನೆ ಹೊರತು ನಾಟಕ ಮಾಡಿ ರಾಜೀನಾಮೆ ನೀಡಿಲ್ಲ ಎಂದು ತಿಳಿಸಿದರು....

ಫೋಟೋ - http://v.duta.us/hSJDSAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/1_Bg-wAA

📲 Get Bellary News on Whatsapp 💬