ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಮುದ್ರಾಡಿ ಸರಕಾರಿ ಹಿ. ಪ್ರಾ. ಶಾಲೆ

  |   Udupinews

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಹೆಬ್ರಿ:ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಕಳೆದ 117 ವರ್ಷಗಳಿಂದ ವಿದ್ಯಾದಾನ ಮಾಡುತ್ತಿರುವ ಹೆಬ್ರಿ ತಾಲೂಕಿನ ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನ ಕಂಡು ಮುನ್ನಡೆಯುತ್ತಿದೆ. 1902ರಲ್ಲಿ ಭಕ್ರೆ ಸಮೀಪ ನಾಗಪ್ಪ ಹೆಗ್ಡೆ ಅವರ ಜಾಗದಲ್ಲಿ ಮುಳಿಹುಲ್ಲಿನ ಕಟ್ಟಡದಲ್ಲಿ ಆರಂಭವಾದ ಶಾಲೆ ಅನಂತರ ಮುದ್ರಾಡಿ ಬಸ್‌ ತಂಗುದಾಣ ಸಮೀಪ ಕೀರ್ತಿಶೇಷ ಮುದ್ರಾಡಿ ಬೀಡು ನಾಗರಾಜ ಅತಿಕಾರಿ ಅವರು ನೀಡಿದ 1.57 ಎಕ್ರೆ ಜಾಗ ಹಾಗೂ ಅವರು ಕಟ್ಟಿಕೊಟ್ಟ ಕಟ್ಟಡದಲ್ಲಿ ಶಾಲೆ ಆರಂಭಗೊಂಡು ದಾನಿಗಳ ನೆರವು ಹಾಗೂ ಸರಕಾರದ ಅನುದಾನದಿಂದ ಸ್ವಂತ ಕಟ್ಟಡವನ್ನು ಹೊಂದಿತ್ತು....

ಫೋಟೋ - http://v.duta.us/evjFtQEA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/DE8etwAA

📲 Get Udupi News on Whatsapp 💬