18ಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಅಂಜನಪ್ಪ ನಾಮಪತ್ರ ಸಲ್ಲಿಕೆ

  |   Chikkaballapuranews

ಚಿಕ್ಕಬಳ್ಳಾಪುರ: ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ನ.18 ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ನಂದಿ ಅಂಜನಪ್ಪ ನಾಮಪತ್ರ ಸಲ್ಲಿಸಲ್ಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಎಸ್‌. ಪಿ.ಶ್ರೀನಿವಾಸ್‌ ತಿಳಿಸಿದರು.

ಕ್ಷೇತ್ರದ ಮಂಚೇನಹಳ್ಳಿ ಹೋಬಳಿ ಘಟಕದ ಯುವ ಕಾಂಗ್ರೆಸ್‌ ಪದಾಧಿಕಾರಿಗಳಿಗೆ ಗುರುವಾರ ಆದೇಶ ಪತ್ರ ವಿತರಿಸಿ ಮಾತ  ನಾಡಿದ ಅವರು, ಕಾಂಗ್ರೆಸ್‌ ಪಕ್ಷ ಯುವ ಜನತೆಯನ್ನು ಬೆಂಬಲಿಸಿ ರಾಜಕೀಯವಾಗಿ ಬೆಳೆಸುವುದರಲ್ಲಿ ಬೇರೆ ಬೇರೆ ಪಕ್ಷಗಳಿಗಿಂತ ಮುಂಚೂಣಿಯಲ್ಲಿದೆ ಎಂದರು.

ಯುವ ಶಕ್ತಿಯೇ ಕಾಂಗ್ರೆಸ್‌ ಪಕ್ಷದ ಆಸ್ತಿ. ಈಗಾಗಲೇ ಜಿಲ್ಲೆಯಲ್ಲಿ ಅತಿ ಹೆಚ್ಚು ಯುವ ಜನತೆಯು ಕಾಂಗ್ರೆಸ್‌ ಪರವಾಗಿರುವುದು ಈ ಹಿಂದಿನ ವಿಧಾನ ಸಭಾ ಕ್ಷೇತ್ರಗಳ ಫ‌ಲಿತಾಂಶವೇ ಸಾಕ್ಷಿ. ಉಪ ಚುನಾವಣೆಯಲ್ಲಿ ಯುವಕರು ಹಗಲಿರುಳು ಪ್ರಚಾರದಲ್ಲಿ ತೊಡಗಿಸಿಕೊಂಡು ಕಾಂಗ್ರೆಸ್‌ ತತ್ವ ಸಿದ್ಧಾಂತ ಮತ್ತು ಕಾಂಗ್ರೆಸ್‌ ಪಕ್ಷದ ಸಾಧನೆಗಳ ಬಗ್ಗೆ ಮತದಾರರಿಗೆ ತಿಳಿಸಬೇಕು ಎಂದು ಹೇಳಿದರು.

18 ರಂದು ಬೆಳಗ್ಗೆ 10 ಗಂಟೆಗೆ ಚಿಕ್ಕಬಳ್ಳಾಪುರ ನಗರದ ವಾಪಸಂದ್ರದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ಮೂಲಕ ತೆರಳಿ ಎ.ಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದರು. ಈ ತಿಂಗಳ ಕೊನೆಯ ವಾರದಲ್ಲಿ ಯುವ ಕಾಂಗ್ರೆಸ್‌ ವತಿಯಿಂದ ಬೈಕ್‌ ರಾಲಿ ಮುಖಾಂತರ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳಲಾಗುವುದು ಎಂದರು....

ಫೋಟೋ - http://v.duta.us/SRiukwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/GoN28QAA

📲 Get Chikkaballapura News on Whatsapp 💬