90 ತಾಂಡಾ ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ

  |   Yadgirinews

ಯಾದಗಿರಿ: ಜಿಲ್ಲೆಯ 90 ಜನವಸತಿ ತಾಂಡಾಗಳನ್ನು 3 ತಿಂಗಳೊಳಗೆ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಪ್ರಾಥಮಿಕ ಅಧಿಸೂಚನೆ ಹೊರಡಿಸಬೇಕು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್‌ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕುರಿತು ಗುರುವಾರ ನಡೆದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಶೀಲ್ದಾರ್‌ ಮತ್ತು ಎಡಿಎಲ್‌ಆರ್‌ ಅಧಿಕಾರಿಗಳು ಸಂಬಂಧಿಸಿದ ತಾಂಡಾಗಳಲ್ಲಿ ಜಂಟಿ ಸಭೆ ನಡೆಸಿ ತಾಂಡಗಳು ಯಾರಿಗೆ ಸೇರಿದ್ದು ಎಂದು ಮೊದಲು ತಿಳಿದುಕೊಳ್ಳಬೇಕು. ಇದರಲ್ಲಿ ಅರಣ್ಯ ಭೂಮಿ, ಕಂದಾಯ ಭೂಮಿ ಅಥವಾ ಖಾಸಗಿ ಭೂಮಿ ಯಾವವು ಎಂದು ಅರಿತುಕೊಳ್ಳಬೇಕು. 90 ತಾಂಡಾಗಳ ಜತೆಗೆ ಅರಣ್ಯ ಪ್ರದೇಶದಲ್ಲಿರುವ 3 ಜನವಸತಿಗಳನ್ನು ಕೂಡ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸಹಾಯಕ ಆಯುಕ್ತರು, ತಹಶೀಲ್ದಾರ್‌, ಭೂದಾಖಲೆಗಳ ಸಹಾಯಕ ನಿರ್ದೇಶಕರು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ತಾಂಡಾಗಳು ಅರಣ್ಯ ಪ್ರದೇಶಕ್ಕೆ ಒಳಪಟ್ಟಿದಲ್ಲಿ ಅರಣ್ಯ ಸಮಿತಿ ಒಪ್ಪಿಗೆ ಪಡೆದು ಘೋಷಣೆ ಮಾಡಬೇಕಾಗಿರುತ್ತದೆ. ಕನಿಷ್ಠ 10 ವರ್ಷಗಳ ಕಾಲ ದಾಖಲೆ ರಹಿತವಾಗಿದ್ದರೂ ಜನವಸತಿ ಇರುವ ತಾಂಡಾ, ಹಟ್ಟಿ ಹಾಗೂ ಹಾಡಿ ಪ್ರತಿ ಮನೆಯವರಿಗೆ ಹಕ್ಕು ಪತ್ರ ನೀಡಿ ನಾಗರಿಕರಿಗೆ ಸಿಗುವ ಮೂಲಭೂತ ಸೌಕರ್ಯ ನೀಡಲು ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶಿಸಿದರು....

ಫೋಟೋ - http://v.duta.us/efIffQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/N3hdjwAA

📲 Get Yadgiri News on Whatsapp 💬