[bangalore-city] - ಅನಧಿಕೃತ ಒಎಫ್ಸಿ ಕಟ್‌

  |   Bangalore-Citynews

ಬೆಂಗಳೂರು: ಅನಧಿಕೃತ ಆಫ್ಟಿಕಲ್‌ ಫೈಬರ್‌ ಕೇಬಲ್‌ (ಒಎಫ್ಸಿ) ವಿರುದ್ಧ ಸಮರ ಸಾರಿರುವ ಬಿಬಿಎಂಪಿ, ನಗರದಲ್ಲಿನ ಅನಧಿಕೃತ ಕೇಬಲ್‌ಗ‌ಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವ ಕೆಲಸ ಆರಂಭಿಸಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರು, ಬಿಬಿಎಂಪಿ ಆಯುಕ್ತರು, ಮೇಯರ್‌ ಸೇರಿದಂತೆ ಪಾಲಿಕೆಯ ಅಧಿಕಾರಿಗಳು ಹಲವಾರು ಬಾರಿ ಟೆಲಿಕಾಂ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ನಗರದಲ್ಲಿ ಸಂಸ್ಥೆಗಳು ಅಳವಡಿಸಿರುವ ಅನಧಿಕೃತ ಕೇಬಲ್‌ಗ‌ಳ ಮಾಹಿತಿ ನೀಡುವಂತೆ ಕೋರಿದ್ದರು. ಜತೆಗೆ ನಿಗದಿತ ಶುಲ್ಕ ಪಾವತಿಸಿ ಕೇಬಲ್‌ಗ‌ಳನ್ನು ಅಧಿಕೃತಗೊಳಿಸಿಕೊಳ್ಳುವಂತೆಯೂ ತಿಳಿಸಲಾಗಿತ್ತು.

ಆದರೆ, ಟೆಲಿಕಾಂ ಸಂಸ್ಥೆಗಳು ಮಾತ್ರ ಪಾಲಿಕೆಗೆ ಮಾಹಿತಿ ನೀಡಿಲ್ಲ. ಪರಿಣಾಮ ನಗರದಲ್ಲಿ ಅಳವಡಿಸಿರುವ ಅನಧಿಕೃತ ಕೇಬಲ್‌ಗ‌ಳ ತೆರವು ಕಾರ್ಯಾಚರಣೆಯನ್ನು ಪಾಲಿಕೆ ಆರಂಭಿಸಿದ್ದು, ಇಂಟರ್‌ನೆಟ್‌ ಸೇವೆ ಕಡಿತವಾಗಿ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇದೀಗ ಟೆಲಿಕಾಂ ಸಂಸ್ಥೆಗಳು ಕಾಲಾವಕಾಶ ಕೋರಿ ಕೇಂದ್ರ ದೂರ ಸಂಪರ್ಕ ನಿಗಮದ ಅಧ್ಯಕ್ಷರು ಹಾಗೂ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ನೀಡಿದ್ದಾರೆ.

ಪಾಲಿಕೆಯಿಂದ ಟೆಲಿಕಾಂ ಸಂಸ್ಥೆಗಳಿಗೆ ಅನಧಿಕೃತ ಕೇಬಲ್‌ಗ‌ಳ ಮಾಹಿತಿ ಬಹಿರಂಗಪಡಿಸಲು ಹಲವಾರು ಬಾರಿ ಅವಕಾಶ ನೀಡಲಾಗಿದೆ. ಆದರೆ, ಸಂಸ್ಥೆಗಳು ಮಾಹಿತಿ ನೀಡಲು ಮುಂದಾಗಿಲ್ಲ. ಜತೆಗೆ ಪಾಲಿಕೆಗೆ ನಿಗದಿತ ಶುಲ್ಕ ಪಾವತಿಸದೆ ಅನಧಿಕೃತವಾಗಿ ಭೂಮಿಯಲ್ಲಿ ಹಾಗು ಮರಗಳ ಮೂಲಕ ಕೇಬಲ್‌ಗ‌ಳನ್ನು ಅಳವಡಿಸುತ್ತಿದ್ದು, ವಾಹನ ಸವಾರರಿಗೆ ತೊಂದರೆಯಾಗುತ್ತಿದೆ....

ಫೋಟೋ - http://v.duta.us/r39nVAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/gGaeMgAA

📲 Get Bangalore City News on Whatsapp 💬