[bangalore-city] - ಅನುಮೋದನೆ ಹಿಂದೆ ಬೃಹತ್‌ ಭ್ರಷ್ಟಾಚಾರ

  |   Bangalore-Citynews

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಬಿಬಿಎಂಪಿಯಲ್ಲಿ ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆಯಡಿ 4261 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಕೌನ್ಸಿಲ್‌ ಸಭೆಯಲ್ಲಿ ಅನುಮೋದನೆ ಪಡೆದ ಆಡಳಿತ ಪಕ್ಷದ ಕ್ರಮ ವಿವಾದದ ಸ್ವರೂಪ ಪಡೆದಿದೆ. ಈ ಕುರಿತಂತೆ ಚುನಾವಣಾ ಆಯೋಗದ ಮೊರೆ ಹೋಗಲು ಬಿಜೆಪಿ ತೀರ್ಮಾನಿಸಿದೆ.

ಇದೊಂದು ಬೃಹತ್‌ ಭ್ರಷ್ಟಾಚಾರವಾಗಿದ್ದು, ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ಅವರನ್ನು ಸೋಮವಾರ ಭೇಟಿ ಮಾಡಿ ದೂರು ನೀಡಲಾಗುವುದು ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕುಡಿಯುವ ನೀರು ಹಾಗೂ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಹೊರತುಪಡಿಸಿ ಬೇರೆ ಕಾಮಗಾರಿಗಳಿಗೆ ಅನುಮತಿ ನೀಡದಂತೆ ಕೋರಲಾಗುವುದು ಎಂದು ಹೇಳಿದ್ದಾರೆ.

ಬಿಬಿಎಂಪಿ ಸಭೆಯಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಮತ್ತು ಎಸ್‌ಐಪಿ ಯೋಜನೆಯಡಿ 4261 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ ಸಂಸ್ಥೆಗೆ ನೀಡಲು ನಿರ್ಧರಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಟೆಂಡರ್‌ ಇಲ್ಲದೆ ಕಾಮಗಾರಿ ನಡೆಸುವುದು ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ....

ಫೋಟೋ - http://v.duta.us/bdguLwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/dIYLxQAA

📲 Get Bangalore City News on Whatsapp 💬