[bangalore-city] - ಬೆಸ್ಕಾಂ, ಪಾಲಿಕೆ ಅಧಿಕಾರಿಗಳ ವಿರುದ್ಧ ಗರಂ ಆದ ಮೇಯರ್‌

  |   Bangalore-Citynews

ಬೆಂಗಳೂರು: ತುಂಡರಿಸಿದ ವಿದ್ಯುತ್‌ ತಂತಿಗಳನ್ನು ಸಮರ್ಪಕವಾಗಿ ಸರಿಪಡಿಸದ ಬೆಸ್ಕಾಂ ಹಾಗೂ ಬಿಬಿಎಂಪಿ ಅಧಿಕಾರಿಗಳನ್ನು ಮೇಯರ್‌ ಗಂಗಾಂಬಿಕೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಮಹಾಲಕ್ಷ್ಮೀ ಬಡಾವಣೆಯ ನಾಗಲಿಂಗೇಶ್ವರ ದೇವಸ್ಥಾನದ ಬಳಿ ವಿದ್ಯುತ್‌ ತಂತಿ ಸ್ಪರ್ಶಿಸಿ ಸಾಯಿ ಚರಣ್‌ ಎಂಬ ಬಾಲಕ ತೀವ್ರ ಗಾಯಗೊಂಡಿದ್ದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ವಿದ್ಯುತ್‌ ತಂತಿಗಳು ತುಂಡಾಗಿ ಅವಘಡ ಸಂಭವಿಸುತ್ತಿದ್ದರೂ ಅಧಿಕಾರಿಗಳು ಕ್ರಮಕ್ಕೆ ಏಕೆ ಮುಂದಾಗುತ್ತಿಲ್ಲ. ಜನರಿಗೆ ತೊಂದರೆಯಾಗುತ್ತದೆ ಎಂಬ ಅರಿವಿಲ್ಲವೇ ಎಂದು ಪ್ರಶ್ನಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದುಕೊಳ್ಳುತ್ತಿರುವುದರಿಂದ ಅಮಾಯಕರು ತೊಂದರೆ ಅನುಭವಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಬೆಸ್ಕಾಂ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ನಗರದಲ್ಲಿ ವಿದ್ಯುತ್‌ ತಂತಿಗಳಿಂದ ಆಗುತ್ತಿರುವ ಅವಘಡಗಳ ಕುರಿತಂತೆ ಚರ್ಚಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಉದ್ಯಾನ ಹಾಗೂ ರಸ್ತೆಬದಿಯ ಬೀದಿ ದೀಪಗಳಿಂದ ವಿದ್ಯುತ್‌ ತಂತಿಗಳು ಚಾಚಿಕೊಂಡು ಅಪಾಯಕ್ಕೆ ಎಡಿಮಾಡುತ್ತಿದ್ದರೆ, ಕೂಡಲೇ ಎಚ್ಚೆತ್ತುಕೊಂಡು ಅವುಗಳನ್ನು ಸರಿಪಡಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಒಂದೊಮ್ಮೆ ನಿರ್ಲಕ್ಷ್ಯ ವಹಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸೂಚಿಸಿದ ಅವರು, ವಿದ್ಯುತ್‌ ತಂತಿ ತಗುಲಿ ಆಸ್ಪತ್ರೆ ಸೇರಿರುವ ಬಾಲಕ ಸಾಯಿ ಚರಣ್‌ ಶೀಘ್ರ ಗುಣಮುಖವಾಗಲಿದೆ ಎಂದು ಹಾರೈಸಿರು....

ಫೋಟೋ - http://v.duta.us/K3l1ugAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/SxxYmwAA

📲 Get Bangalore City News on Whatsapp 💬