[bangalore-rural] - ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

  |   Bangalore-Ruralnews

ದೊಡ್ಡಬಳ್ಳಾಪುರ: ಕೆರೆ ಒತ್ತುವರಿ ಹಾಗೂ ಸಾರ್ವಜನಿಕರ ಸಹಕಾರದಿಂದ ನಡೆಯುತ್ತಿರುವ ಕೆರೆಗಳ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಈ ಕುರಿತು ಲೋಕಾಯುಕ್ತ ನ್ಯಾಯ ಮೂರ್ತಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಲೋಕಾಯುಕ್ತ ಡಿವೈಎಸ್‌ಪಿ ನವೀನ್‌ ಕುಮಾರ್‌ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾರ್ವ ಜನಿಕರ ಸಹಕಾರದಿಂದ ನಡೆಯುತ್ತಿರುವ ಕೆರೆಗಳ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆಯುವ ಹಿನ್ನೆಲೆಯಲ್ಲಿ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಪ್ರತಿ ಕೆರೆಯ ಪರಿಶೀಲನೆ: ಕೆರೆಗಳ ಭೇಟಿ ಉದ್ದೇಶದ ಕುರಿತು ಮಾಹಿತಿ ನೀಡಿದ ಅವರು, ಗ್ರಾಮಾಂತರ ಜಿಲ್ಲೆಯಲ್ಲಿ ಕೆರೆಗಳನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಹಾಗೂ ವಾಣಿಜ್ಯ ಉದ್ದೇಶಗಳಿಗೆ ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳು ಹೆಚ್ಚಾಗಿವೆ. ಈ ಬಗ್ಗೆ ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಪ್ರತಿ ಕೆರೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರದ ನೆರವಿಲ್ಲದೇ ಕೆರೆ ಅಭಿವೃದ್ಧಿ: ಆರು ತಿಂಗಳ ಹಿಂದಷ್ಟೇ ನಗರದ ಮುತ್ತೂರು ಕೆರೆ ಕಾಮಗಾರಿ ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು ಭೇಟಿ ನೀಡಿದ್ದರು. ಈಗ ಕೆರೆಗಳ ಅಭಿವೃದ್ಧಿ ಕಾಮಗಾರಿ ಹೇಗೆ ನಡೆಯುತ್ತಿದೆ, ಯಾವ ಹಂತದಲ್ಲಿದೆ ಎನ್ನುವ ಬಗ್ಗೆ ಖುದ್ದು ಭೇಟಿ ನೀಡಿ ಮಾಹಿತಿ ಸಂಗ್ರಹಿಸುವಂತೆ ತಿಳಿಸಿದ್ದರು. ಆರು ತಿಂಗಳಲ್ಲಿ ಕೆರೆಗಳ ಸ್ವರೂಪವೇ ಬದಲಾಗುವಷ್ಟು ಅಭಿವೃದ್ಧಿ ಕೆಲಸ ನಡೆದಿವೆ. ಸರ್ಕಾರದ ನೆರವಿಲ್ಲದೆಯೂ ಕೆರೆಗಳ ಅಭಿವೃದ್ಧಿಯನ್ನು ಮಾಡಲು ಸಾಧ್ಯವಿದೆ ಎಂಬುದು ಜಿಲ್ಲೆಯಲ್ಲಿ ನಡೆದಿರುವ 24 ಕೆರೆಗಳನ್ನು ನೋಡಿದರೆ ತಿಳಿಯುತ್ತದೆ ಎಂದು ಹೇಳಿದರು....

ಫೋಟೋ - http://v.duta.us/ZHxhgQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/1x4kwwAA

📲 Get Bangalore Rural News on Whatsapp 💬