[bidar] - ಕುಡಿಯುವ ನೀರು ಪೂರೈಕೆಯಲ್ಲಿ ತಾರತಮ್ಯ-ಆಕ್ರೋಶ

  |   Bidarnews

ಔರಾದ: ಪಟ್ಟದ ರಾಮನಗರ ಬಡಾವಣೆಗೆ ಟ್ಯಾಂಕರ್‌ ನೀರು ಪೂರೈಸುವಲ್ಲಿ ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ತಾರತಮ್ಯ ಮಾಡುತ್ತಿದ್ದಾರೆಂದು ಆರೋಪಿಸಿ ಬಡಾವಣೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣ ಪಂಚಾಯತ ವ್ಯಾಪ್ತಿಯ ಪ್ರಮುಖ ಬಡಾವಣೆಗಳಿಗೆ ಎರಡು ದಿನಗಳಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ರಾಮನಗರ ಬಡಾವಣೆ ಸಾವಿರ ಜನಸಂಖ್ಯೆ ಹೊಂದಿರುವ ಕೂಲಿ ಕಾರ್ಮಿಕರು ಹಾಗೂ ಹಿಂದುಳಿದ ವರ್ಗದ ಜನರು ವಾಸಿಸುವ ಬಡಾವಣೆಯಾಗಿದೆ. ಆದರೂ ಅಧಿಕಾರಿಗಳು ಮಾತ್ರ ಇಲ್ಲಿ ನೀರು ಸರಬರಾಜು ಮಾಡುತ್ತಿಲ್ಲ.

ಬಡಾವಣೆಯಲ್ಲಿರುವ ಕುಡಿಯುವ ನೀರಿನ ಮೂಲಗಳು ಸಂಪೂರ್ಣ ಖಾಲಿಯಾಗಿದ್ದು, ನಿವಾಸಿಗಳು ಹನಿ ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ. ಬಡಾವಣೆಗೆ ನೀರು ಬಾರದಿರುವುದರಿಂದ ಇಲ್ಲಿನ ನಿವಾಸಿಗಳು ಸ್ನಾನ ಮಾಡಲು ಕೂಡ ಯೋಚಿಸಬೇಕಾದ ಸ್ಥಿತಿ ಬಂದಿದೆ. ಅಲ್ಲದೇ ಬಡಾವಣೆಯಲ್ಲಿ ನೀರು ದೊರೆಯದಿರುವುದರಿಂದ ಕೆಲವರು ತಮ್ಮ ಸಂಬಂಧಿಕರ ಮನೆಗೆ ವಲಸೆ ಹೋಗುವ ವಿಚಾರದಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ನೀರು ಸರಬರಾಜು ಮಾಡುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಪಟ್ಟಣದ ನಿವಾಸಿಗಳು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಸಹ ಬರೆದಿದ್ದಾರೆ....

ಫೋಟೋ - http://v.duta.us/RVHBSQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/C6DC6gAA

📲 Get Bidar News on Whatsapp 💬