[chikkaballapura] - ಸಂವಿಧಾನ ಆಶಯಕ್ಕೆ ಬದ್ಧರಾಗಿ

  |   Chikkaballapuranews

ಚಿಕ್ಕಬಳ್ಳಾಪುರ: ಸರ್ಕಾರದ ಸೇವೆಯಲ್ಲಿದ್ದಾಗ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಕಾನೂನು ಚೌಕಟ್ಟಿನಲ್ಲಿ ಬದ್ಧವಾಗಿ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸರ್ಕಾರಿ ಸೇವೆಯಲ್ಲಿ ಸಾರ್ಥಕತೆ ಪಡೆದು ಜನಮನ್ನಣೆ ಗಳಿಸಬಹುದು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್‌.ಎಚ್‌.ಕೋರಡ್ಡಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಜಿಲ್ಲಾ ನ್ಯಾಯಾಲಯ ಹಾಗೂ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಉತ್ತಮ ಸೇವೆ: ನ್ಯಾಯಾಂಗ ಇಲಾಖೆ ಇಂದಿಗೂ ಜನರ ವಿಶ್ವಾಸ, ನಂಬಿಕೆ ಉಳಿಸಿಕೊಂಡಿದೆ ಅಂದರೆ ಅಧಿಕಾರಿಗಳ ಹಾಗೂ ನ್ಯಾಯಾಧೀಶರ ಪ್ರಾಮಾಣಿಕ ಸೇವೆ, ಜನಪರವಾದ ತೀರ್ಪುಗಳೇ ಕಾರಣ. ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುವವರಿಗೆ ವರ್ಗಾವಣೆ ಖಾಯಂ ಆಗಿರುತ್ತದೆ. ಸೇವೆಯನ್ನು ಸಾರ್ಥಕತೆ ಪಡಿಸಿಕೊಳ್ಳುವ ದಿಸೆಯಲ್ಲಿ ಕಾರ್ಯನಿರ್ವಹಿಸಬೇಕೆಂದರು. ಹಲವು ವರ್ಷಗಳ ಕಾಲ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ 2 ನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಸಾಯೆಬಾ ಸುಲ್ತಾನ, 2 ನೇ ಹೆಚ್ಚುವರಿ ಕಿರಿಯ ಸಿವಿಲ್‌ ನ್ಯಾಯಾಧೀಶೆ ಶೈಲಜಾ ಅವರು ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು....

ಫೋಟೋ - http://v.duta.us/JhjqdQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/zVygVgAA

📲 Get Chikkaballapura News on Whatsapp 💬