[chikkamagaluru] - ಮೂಡಿಗೆರೆಯಲ್ಲಿ ಸಮಬಲದ ಹಣಾಹಣಿ?

  |   Chikkamagalurunews

ಚಿಕ್ಕಮಗಳೂರು: ಮಲೆನಾಡು ಹಾಗೂ ಬಯಲುಸೀಮೆ ಪ್ರದೇಶಗಳನ್ನು ಒಳಗೊಂಡಿರುವ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಳೆದ ಬಾರಿಗಿಂತ ಸ್ವಲ್ಪ ಮಟ್ಟಿಗೆ ಹೆಚ್ಚಿನ ಮತದಾನವಾಗಿದ್ದು, ಬಿಜೆಪಿ ಹಾಗೂ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ.

ಮೂಡಿಗೆರೆ ವಿಧಾನಸಭಾ ಕ್ಷೇತ್ರವು ಮೂಡಿಗೆರೆ ತಾಲೂಕು ಹಾಗೂ ಚಿಕ್ಕಮಗಳೂರು ತಾಲೂಕಿನ ಅಂಬಳೆ, ಆಲ್ದೂರು ಮತ್ತು ಆವತಿ ಹೋಬಳಿಗಳನ್ನು ಒಳಗೊಂಡ ಕ್ಷೇತ್ರವಾಗಿದೆ. ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ.72.27 ರಷ್ಟು ಮತದಾನವಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಮತದಾನದಲ್ಲಿ ಸ್ವಲ್ಪ ಮಟ್ಟಿನ ಏರಿಕೆಯುಂಟಾಗಿದ್ದು, ಶೇ.74.92 ರಷ್ಟು ಮತದಾನವಾಗಿದೆ. ಮತದಾನದಲ್ಲಿ ಏರಿಕೆಯುಂಟಾಗಿರುವ ಲಾಭ ಯಾವ ಅಭ್ಯರ್ಥಿಗೆ ಆಗಲಿದೆ ಎಂಬ ಲೆಕ್ಕಾಚಾರ ಕ್ಷೇತ್ರದಲ್ಲಿ ನಡೆಯುತ್ತಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ಅಭ್ಯರ್ಥಿಗಿಂತ ಸುಮಾರು 17 ಸಾವಿರದಷ್ಟು ಮತಗಳನ್ನು ಹೆಚ್ಚಾಗಿ ಪಡೆದುಕೊಂಡಿದ್ದರು. ಆದರೆ ಈ ಬಾರಿ ಅಷ್ಟು ಪ್ರಮಾಣದ ಮುನ್ನಡೆ ಪಡೆಯುವುದು ಕಷ್ಟವೆಂದು ಹೇಳ ಲಾಗುತ್ತಿದೆಯಾದರೂ ಬಿಜೆಪಿ ಅಭ್ಯರ್ಥಿಯೇ ಮೈತ್ರಿ ಪಕ್ಷದ ಅಭ್ಯರ್ಥಿಗಿಂತ ಹೆಚ್ಚಿನ ಮತ ಪಡೆಯಲಿದ್ದಾರೆ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ....

ಫೋಟೋ - http://v.duta.us/w8Wz5wAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/I9gjKwAA

📲 Get Chikkamagaluru News on Whatsapp 💬