[chitradurga] - ಕಾಂಗ್ರೆಸ್‌ ಭದ್ರಕೋಟೆ ಭೇದಿಸುತ್ತಾ ಬಿಜೆಪಿ?

  |   Chitradurganews

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ವ್ಯಾಪ್ತಿಯ, ಆಂಧ್ರಗಡಿ ಭಾಗಕ್ಕೆ ಹೊಂದಿಕೊಂಡಿರುವ ಚಳ್ಳಕೆರೆ ವಿಧಾನಸಭಾ ಎಸ್ಟಿ ಮೀಸಲು ಕ್ಷೇತ್ರವು ಕಾಂಗ್ರೆಸ್‌ ಪಕ್ಷದ ಭದ್ರ ಕೋಟೆಯಾಗಿದ್ದು, ಇದನ್ನು ಭೇದಿಸಲು ಬಿಜೆಪಿ ಲಗ್ಗೆ ಇಡಲು ಇನ್ನಿಲ್ಲದ ಪ್ರಯತ್ನ ಮಾಡಿದೆ.

ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಸ್ಥಿತ್ಯಂತರಗಳು ಸಂಭವಿಸಿ ರಾಹುಲ್ ಗಾಂಧಿ ಮತ್ತು ಕುಮಾರಸ್ವಾಮಿ ಅವರ ಪರಿವರ್ತನಾ ಸಮಾವೇಶದಲ್ಲಿ ವಿಧಾನಸಭಾ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಟಿ. ಕುಮಾರಸ್ವಾಮಿ ಬಿಜೆಪಿ ತೊರೆದು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.

ಆದರೆ ಕಾಂಗ್ರೆಸ್‌ ಪಕ್ಷದ ಇಬ್ಬರು ಜಿಪಂ ಸದಸ್ಯರು ಬಹಿರಂಗವಾಗಿಯೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತ ಪ್ರಚಾರ ಮಾಡಿ ಬಿಜೆಪಿಗೆ ಆಗಲಿದ್ದ ಹಿನ್ನಡೆ ತಪ್ಪಿಸಿದ್ದಾರೆ ಎಂದು ಬೂತ್‌ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ.

ಮೈತ್ರಿಗೆ ಬಂಪರ್‌: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಿಂದಾಗಿ ಕಾಂಗ್ರೆಸ್‌ ಅಭ್ಯರ್ಥಿಗೆ ಪರಶುರಾಂಪುರ, ಚಳ್ಳಕೆರೆ ನಗರ, ಜಾಜೂರು ಸೇರಿದಂತೆ ಚಳ್ಳಕೆರೆ ಪೂರ್ವ ದಿಕ್ಕಿಗೆ ಬಂಪರ್‌ ಕ್ರಾಪ್‌ ಸಿಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

ಪ್ರತಿ ಬೂತ್‌ನಲ್ಲೂ ಪೈಪೋಟಿ: ಹಾಲಿ ಕಾಂಗ್ರೆಸ್‌ ಪಕ್ಷದ ಶಾಸಕ ಟಿ. ರಘುಮೂರ್ತಿ ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪ ಪರವಾಗಿ ಟೊಂಕಕಟ್ಟಿ ಹಗಲಿರುಳು ದುಡಿದಿದ್ದಾರೆ. ಇವರ ಜೊತೆಗೆ ಜೆಡಿಎಸ್‌ ಕಾರ್ಯಕರ್ತರು, ಮುಖಂಡರು ಇನ್ನಿಲ್ಲದಂತೆ ಕ್ಷೇತ್ರದ ಪ್ರತಿ ಬೂತ್‌ನಲ್ಲೂ ತೀವ್ರ ಸ್ಪರ್ಧೆ ನೀಡಿದ್ದಾರೆ. ಇದು ಕಾಂಗ್ರೆಸ್‌ ಅಭ್ಯರ್ಥಿಗೆ ಅನುಕೂಲ ಎನ್ನಲಾಗುತ್ತಿದೆ....

ಫೋಟೋ - http://v.duta.us/gKEsSAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/NWLl0QAA

📲 Get Chitradurga News on Whatsapp 💬