[dharwad] - ಹೋಮಿಯೋಪಥಿ ಚಿಕಿತ್ಸೆ ಹೆಚ್ಚಿನ ಸಂಶೋಧನೆ ಅಗತ್ಯ

  |   Dharwadnews

ಹುಬ್ಬಳ್ಳಿ: ಹೋಮಿಯೋಪಥಿ ಚಿಕಿತ್ಸಾ ಪದ್ಧತಿಯಲ್ಲಿ ಹೆಚ್ಚಿನ ಪ್ರಮಾಣದ ಸಂಶೋಧನೆಗಳ ಅಗತ್ಯವಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.

ವಿಶ್ವ ಹೋಮಿಯೋಪಥಿಕ್‌ ದಿನ ಹಾಗೂ ಡಾ| ಸ್ಯಾಮುವೆಲ್ ಹನ್ನೆಮನ್‌ 264ನೇ ಜನ್ಮ ದಿನಾಚರಣೆ ಪ್ರಯುಕ್ತ ಹೋಮಿಯೋಪಥಿಕ್‌ ಮೆಡಿಕಲ್ ಅಸೋಸಿಯೇಶನ್‌ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಚಿಕಿತ್ಸಾ ವಿಧಾನ ಜರ್ಮನ್‌ ದೇಶದಲ್ಲಿ ಆವಿಷ್ಕಾರಗೊಂಡಿತಾದರೂ ಭಾರತದಲ್ಲಿ ಸಾಕಷ್ಟು ಖ್ಯಾತಿ ಗಳಿಸಿದೆ. ಈ ಚಿಕಿತ್ಸಾ ವಿಧಾನ ಮತ್ತಷ್ಟು ಜನಪ್ರಿಯಗೊಳ್ಳಬೇಕಾದರೆ ಒಳ್ಳೆಯ ಸಂಶೋಧನೆಗಳ ಅಗತ್ಯವಿದೆ ಎಂದರು.

ಹೋಮಿಯೋಪಥಿ ಪದ್ಧತಿಯಲ್ಲಿ ಕೆಲ ದೀರ್ಘ‌ ಕಾಯಿಲೆಗೆ ಉತ್ತಮ ಚಿಕಿತ್ಸೆ ದೊರೆಯುತ್ತದೆ ಎನ್ನುವ ಭಾವನೆ ಜನರಲ್ಲಿದೆ. ಹೀಗಾಗಿ ಕೆಲವರು ಈ ಚಿಕಿತ್ಸಾ ವಿಧಾನ ಅನುಸರಿಸುತ್ತಿದ್ದಾರೆ. ಆದರೆ ಈ ಚಿಕಿತ್ಸಾ ವಿಧಾನದ ಕುರಿತು ಜನರಲ್ಲಿ ಜಾಗೃತಿ ಇಲ್ಲದಂತಾಗಿದೆ. ಗುಣಪಡಿಸಿದ ಕಾಯಿಲೆಗಳ ಕುರಿತು ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸ ಆಗಬೇಕಾಗಿದೆ. ಇಂತಹ ಪರ್ಯಾಯ ಚಿಕಿತ್ಸಾ ಪದ್ಧತಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಹೇಳಿದರು....

ಫೋಟೋ - http://v.duta.us/w54BDgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/fc1lrAAA

📲 Get Dharwad News on Whatsapp 💬