[kalburagi] - ಜೀವ ಜಲಕ್ಕೆ ಪರಿತಪಿಸುತ್ತಿರುವ ಜನ

  |   Kalburaginews

ಕಲಬುರಗಿ: ಬಿಸಿಲೂರಿನಲ್ಲಿ ಝಳದೊಂದಿಗೆ ದಿನದಿಂದ ದಿನಕ್ಕೆ ನೀರಿನ ಹಾಹಾಕಾರ ಹೆಚ್ಚಾಗುತ್ತಿದೆ. ಮಹಾನಗರ ಸೇರಿದಂತೆ ಜಿಲ್ಲಾದ್ಯಂತ ಜನ ಸಾಮಾನ್ಯರು ನೀರಿನ ತಾಪತ್ರಯ ಎದುರಿಸುತ್ತಿದ್ದಾರೆ. ಜಲ ಮೂಲಗಳೆಲ್ಲ ಬತ್ತಿರುವುದರಿಂದ 111 ಗ್ರಾಮಗಳಿಗೆ ವಿವಿಧ ಮೂಲಗಳಿಂದ ನೀರು ಪೂರೈಸಲಾಗುತ್ತಿದೆ.

ಮುಂಗಾರು, ಹಿಂಗಾರು ಮಳೆ ಕೈಕೊಟ್ಟಿರುವುದರಿಂದ ಬೇಸಿಗೆ ಆರಂಭಕ್ಕೂ ಮುನ್ನವೇ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ತಲೆದೋರಿತ್ತು. ಈಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕುಡಿಯುವ ನೀರಿಗೂ ಜನ ಪರದಾಡುವಂತಾಗಿದೆ. ನೀರಿನ ಸಮಸ್ಯೆ ಪರಿಹರಿಸುವುದೇ ಅಧಿಕಾರಿಗಳಿಗೆ ಸವಾಲಿನ ಕೆಲಸವಾಗಿದ್ದು, ನೀರು ಪೂರೈಕೆ ಮಾರ್ಗ ಕಂಡುಕೊಳ್ಳಲು ಬೆವರು ಸುರಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಜಲ ಮೂಲಗಳ ಕೊರತೆ ಒಂದೆಡೆಯಾದರೆ, ನೀರು ಸಂಗ್ರಹ ತಾಣಗಳಾದ ಬೆಣ್ಣೆತೊರಾ, ಭೀಮಾ, ಅಮರ್ಜಾ, ಕಾಗಿಣಾ, ಗಂಡೋರಿ, ಮುಲ್ಲಾಮಾರಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿದಿದೆ. ಜತೆಗೆ ಅಂತರ್ಜಲ ಮಟ್ಟ ಪಾತಾಳ ಸೇರಿ ಕೊಳವೆ ಬಾವಿಗಳಲ್ಲೂ ನೀರು ಸಿಗುತ್ತಿಲ್ಲ. ಇದರಿಂದಾಗಿ ಎಲ್ಲೆಡೆ ನೀರಿನ ಬವಣೆ ಭುಗಿಲೆದ್ದಿದ್ದು, ಜೀವ ಜಲಕ್ಕಾಗಿ ಜನತೆ ಪರಿತಪಿಸುತ್ತಿದ್ದಾರೆ.

780 ಸಮಸ್ಯಾತ್ಮಕ ಗ್ರಾಮ: ಜಿಲ್ಲೆಯಲ್ಲಿ ಹಳ್ಳ, ಕೊಳ್ಳ, ಕೊಳವೆ ಬಾವಿಗಳು ಬರಿದಾಗಿದ್ದು ನೀರಿನ ಸಮಸ್ಯೆ ತಾರಕಕ್ಕೇರಿದೆ....

ಫೋಟೋ - http://v.duta.us/jYg3nwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/efUlKQAA

📲 Get Kalburagi News on Whatsapp 💬