[karnataka] - ಉಪ ಚುನಾವಣೆಗೆ ಒಳಪೆಟ್ಟಿನ ಬೇಗುದಿ

  |   Karnatakanews

ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಿರುಸು ಸದ್ಯಕ್ಕೆ ಮುಕ್ತಾಯವಾಗಿರುವಂತೆ, ಮೇ 19 ರಂದು ನಡೆಯಲಿರುವ 2 ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷಗಳ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಮತ್ತು ಬಿಜೆಪಿ ನಡುವೆ ನೇರ ಹೋರಾಟ ನಡೆಯಲಿದೆ. ಪೂರಕವಾಗಿ ಎರಡು ಕಡೆಯಲ್ಲೂ ಅಭ್ಯರ್ಥಿಗಳಿಗೆ ಒಳಪೆಟ್ಟಿನ ಭೀತಿ ಕಾಡತೊಡಗಿದೆ.

ಪೌರಾಡಳಿತ ಸಚಿವರಾಗಿದ್ದ ಸಿ.ಎಸ್‌. ಶಿವಳ್ಳಿ ಅಕಾಲಿಕ ನಿಧನದಿಂದ ಧಾರವಾಡ ಜಿಲ್ಲೆ ಕುಂದಗೋಳ ವಿಧಾನ ಸಭೆ ಕ್ಷೇತ್ರ ಮತ್ತು ಕಾಂಗ್ರೆಸ್‌ ಶಾಸಕರಾಗಿದ್ದ ಡಾ| ಉಮೇಶ ಜಾಧವ್‌ ಅವರ ರಾಜೀನಾಮೆಯಿಂದ ಕಲಬುರಗಿ ಜಿಲ್ಲೆ ಚಿಂಚೋಳಿ ಕ್ಷೇತ್ರಕ್ಕೆ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ಎದುರಾಗಿದೆ. ಕುಂದಗೋಳದಲ್ಲಿ ಕಾಂಗ್ರೆಸ್‌ ಮತ್ತು ಚಿಂಚೋಳಿಯಲ್ಲಿ ಬಿಜೆಪಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿವೆ.

ಕುಂದಗೋಳದಲ್ಲಿ ಸಿ.ಎಸ್‌. ಶಿವಳ್ಳಿ ಅವರ ಪತ್ನಿ ಕುಸುಮಾವತಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದರೆ, ಬಿಜೆಪಿ ಮಾಜಿ ಶಾಸಕ ಎಸ್‌.ಐ. ಚಿಕ್ಕನಗೌಡರ್‌ ಅವರನ್ನು ಮತ್ತೂಮ್ಮೆ ಕಣ ಕ್ಕಿಳಿ ಸುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ. ಚಿಂಚೋಳಿ ಕ್ಷೇತ್ರದಲ್ಲಿ ಡಾ| ಉಮೇಶ ಜಾಧವ್‌ ಪುತ್ರ ಡಾ| ಅವಿನಾಶ ಜಾಧವ್‌ ಬಿಜೆಪಿ ಅಭ್ಯರ್ಥಿ. ಲೋಕಸಭೆ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ವಲಸೆ ಬಂದ ಕಲಬುರಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಸುಭಾಷ್‌ ರಾಠೊಡ್‌ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಹುರಿಯಾಳು....

ಫೋಟೋ - http://v.duta.us/MSz-MwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/4wFDIgAA

📲 Get Karnatakanews on Whatsapp 💬