[karnataka] - ಕುಂದಗೋಳ, ಚಿಂಚೋಳಿ ಉಪಚುನಾವಣೆ : ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

  |   Karnatakanews

ಹುಬ್ಬಳ್ಳಿ: ಪೌರಾಡಳಿತ ಸಚಿವರಾಗಿದ್ದ ಕಾಂಗ್ರೆಸ್‌ನ ಸಿ.ಎಸ್‌. ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನ ಸಭಾ ಕ್ಷೇತ್ರ ಹಾಗೂ ಕಾಂಗ್ರೆಸ್‌ ಶಾಸಕರಾಗಿದ್ದ ಡಾ. ಉಮೇಶ ಜಾಧವ್‌ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಕ್ಷೇತ್ರಕ್ಕೆ ಇದೇ ಮೇ 19ರಂದು ಉಪಚುನಾವಣೆ ನಡೆಯಲಿದೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷ ಹಾಗೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಈ ಕ್ಷೇತ್ರಗಳಲ್ಲಿ ನಡೆಯಲಿದೆ. ಕುಂದಗೋಳ ಕ್ಷೇತ್ರದಲ್ಲಿ ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಇದಕ್ಕೂ ಮೊದಲು ಕುಸುಮಾ ಶಿವಳ್ಳಿ ಅವರು ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ರಾಜ್ಯದ ಪ್ರಮುಖ ಕಾಂಗ್ರೆಸ್‌ ನಾಯಕರ ಉಪಸ್ಥಿತಿಯಲ್ಲಿ ಭರ್ಜರಿ ರೋಡ್‌ ಶೋ ನಡೆಯಲಿದೆ. ಇದಕ್ಕಾಗಿ ಮಾಜೀ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಶಾಸಕ ಭೈರತಿ ಸುರೇಶ್‌ ಸೇರಿದಂತೆ ಘಟಾನುಘಟಿ ‘ಕೈ’ ನಾಯಕರು ಹುಬ್ಬಳ್ಳಿ ತಲುಪಿದ್ದಾರೆ.

ಯಾವುದೇ ಕಾರಣಕ್ಕೂ ಈ ಕ್ಷೇತ್ರ ‘ಕೈ’ ತಪ್ಪಲು ಬಿಡಬಾರದು ಎಂಬುದಾಗಿ ಕಾಂಗ್ರೆಸ್‌ ನಾಯಕರ ಪಣವಾಗಿದೆ. ಇನ್ನು ಶಿವಳ್ಳಿ ಅವರ ಪತ್ನಿಯೇ ಇಲ್ಲಿ ಸ್ಪರ್ಧಿಸಿರುವುದರಿಂದ ಅನುಕಂಪದ ಅಲೆಯ ಆಧಾರದಲ್ಲಿ ಕಾಂಗ್ರೆಸ್‌ ಗೆಲುವು ಸುಲಭವಾಗಲಿದೆ ಎನ್ನುವುದು ಪಕ್ಷದ ನಾಯಕರ ಅಭಿಪ್ರಾಯವಾಗಿದೆ....

ಫೋಟೋ - http://v.duta.us/E3DqAwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/XWFagAAA

📲 Get Karnatakanews on Whatsapp 💬