[karnataka] - ಬೆಸ್ಟ್ ಆಫ್ ಲಕ್ : ನಾಳೆ 12 ಗಂಟೆಗೆ SSLC ಫ‌ಲಿತಾಂಶ

  |   Karnatakanews

ಬೆಂಗಳೂರು: 2018-19ನೇ ಸಾಲಿನಲ್ಲಿ ನಡೆದ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯ ಫ‌ಲಿತಾಂಶ ಎಪ್ರಿಲ್‌ 30ರ ಮಂಗಳವಾರದಂದು ಪ್ರಕಟವಾಗಲಿದೆ.

ಇದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದ್ದು ಅಲ್ಲೇ ಫ‌ಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಮಂಡಳಿಯ ನಿರ್ದೇಶಕಿ ವಿ. ಸುಮಂಗಲಾ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಾಳೆ ಪ್ರೌಢಶಿಕ್ಷಣ ಮಂಡಳಿಯ ಅಧಿಕೃತ ವೆಬ್‌ ಸೈಟ್‌ ಗಳಲ್ಲಿ ಫ‌ಲಿತಾಂಶ ಪ್ರಕಟವಾಗಲಿದೆ ಮತ್ತು ಮರುದಿನ ಅಂದರೆ ಮೇ 01ರಂದು ರಾಜ್ಯದ ಎಲ್ಲಾ ಪ್ರೌಢಶಾಲೆಗಳಲ್ಲಿ ಫ‌ಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸುಮಂಗಲಾ ಅವರು ತಿಳಿಸಿದರು.

ಫ‌ಲಿತಾಂಶಗಳ ಜೊತೆಯಲ್ಲೇ ತಾತ್ಕಾಲಿಕ ಅಂಕಪಟ್ಟಿಗಳನ್ನೂ ಸಹ ವಿದ್ಯಾರ್ಥಿಗಳಿಗೆ ಒದಗಿಸುವ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿದೆ. ಆಯಾಯಾ ಶಾಲೆಗಳ ಮುಖ್ಯೋಪಾಧ್ಯಯರು ತಮ್ಮ ಶಾಲೆಯ ಲಾಗಿನ್‌ ವ್ಯವಸ್ಥೆಯ ಮೂಲಕ ತಮ್ಮ ವಿದ್ಯಾರ್ಥಿಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್‌ ಲೋಡ್‌ ಮಾಡಿಕೊಂಡು ತಮ್ಮ ಸಹಿಯೊಂದಿಗೆ ವಿದ್ಯಾರ್ಥಿಗಳಿಗೆ ನೀಡಬಹುದಾಗಿರುತ್ತದೆ.

ಕಳೆದ ಬಾರಿಯಂತೆ ಈ ಬಾರಿಯೂ ಸಹ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ ಗೆ ಸಂದೇಶವನ್ನು ಕಳುಹಿಸುವ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ ಎಂದು ಸುಮಂಗಲಾ ಅವರು ಮಾಹಿತಿ ನೀಡಿದರು....

ಫೋಟೋ - http://v.duta.us/NIm83QAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/mzsTxAAA

📲 Get Karnatakanews on Whatsapp 💬