[kolar-karnataka] - ಅಪರಿಚಿತರ ಬಗ್ಗೆ ಎಚ್ಚರ: ಎಸ್ಪಿ

  |   Kolar-Karnatakanews

ಮುಳಬಾಗಿಲು: ತಾಲೂಕಿನಲ್ಲಿ ಯಾರೇ ಅನುಮಾನಾಸ್ಪದವಾಗಿ ಕಂಡು ಬಂದರೂ ಕೂಡಲೇ ಹತ್ತಿರದ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವ ಮೂಲಕ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ಸಹಕಾರ ನೀಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ರೋಹಿಣಿ ಕಟೋಚ್ ಸೆಪಟ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್‌ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೂ ಮುಖ್ಯವಾಗಿ ಅಪರಾಧಗಳ ತಡೆಗೆ ಅಲ್ಲದೇ ಅಪರಾಧ ಪತ್ತೆಗಾಗಿ ಪೊಲೀಸರು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಲ್ಲದೇ, ಈ ಕುರಿತು ಜನರೂ ಸಾಕಷ್ಟು ಜಾಗೃತರಾಗಿಬೇಕು ಎಂದು ತಿಳಿಸಿದರು.

ಅಪರಿಚಿತರ ಬಗ್ಗೆ ಎಚ್ಚರ: ಮನೆ ಬಾಗಿಲಿಗೆ ಒಳಗಡೆಯಿಂದ ಡೋರ್‌ ಲಾಕ್‌ ಅಳವಡಿಸಿ ಕಳವಾಗುವುದನ್ನು ತಪ್ಪಿಸಿ, ಅಪರಿಚಿತರು ಮನೆಗೆ ಬಂದರೆ ಪರೀಕ್ಷಿಸಿದೇ ಒಳಗೆ ಕರೆದುಕೊಳ್ಳಬಾರದು, ಮಹಿಳೆಯರು ರಸ್ತೆಯಲ್ಲಿ ನಡೆದು ಹೋಗುವಾಗ ನಿಮ್ಮ ಹಿಂದೆ ಮತ್ತು ಮುಂದೆ ಓಡಾಡುವ ಅಪರಿಚಿತರ ಬಗ್ಗೆ ಎಚ್ಚರವಾಗಿರಬೇಕೆಂದರು.

ಪೊಲೀಸರಿಗೆ ಮಾಹಿತಿ ನೀಡಿ: ನಿಮ್ಮ ಕಾರು ಅಥವಾ ಜೀಪುಗಳಲ್ಲಿ ವಸ್ತುಗಳನ್ನು ಇಟ್ಟು ಬೀಗ ಹಾಕದೇ ಇರಬೇಡಿ, ಎಟಿಎಂ ಕಾರ್ಡ್‌ ಹಿಂದೆ ನಿಮ್ಮ ಗುಪ್ತ ಪಿನ್‌ ಕೋಡನ್ನು ಬರೆಯಬೇಡಿರಿ. ಎಟಿಎಂನಲ್ಲಿ ಹಣ ಪಡೆಯುವಾಗ ಅಪರಿಚಿತರ ಸಹಾಯ ಪಡೆಯಬೇಡಿ, ಮೈಮೇಲೆ ಹೇಸಿಗೆ ಎರಚಿ ಗಮನ ಬೇರೆಡೆ ಸೆಳೆದು ಹಣದ ಚೀಲ/ಪೆಟ್ಟಿಗೆ ಕದಿಯುತ್ತಿರುವ ಕಳ್ಳರ ಬಗ್ಗೆ ಎಚ್ಚರವಿರಲಿ, ಅಪರಿಚಿತರು-ಸಂಶಯಾಸ್ಪದ ವ್ಯಕ್ತಿಗಳು ದಾಖಲೆಯಿಲ್ಲದೇ ಮೊಬೈಲ್ ಅಥವಾ ಇನ್ನಾವುದೇ ಸ್ವತ್ತಿನ ವಸ್ತುಗಳನ್ನು ಮಾರಾಟ ಮಾಡಲು ಅಥವಾ ಅಡ ಇಡಲು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಪರಾಧಗಳಿಗೆ ಕಡಿವಾಣ ಹಾಕಬೇಕೆಂದರು....

ಫೋಟೋ - http://v.duta.us/dmWfagAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/19xdYAAA

📲 Get Kolar Karnataka News on Whatsapp 💬