[mysore] - ಗ್ರಾಮಾಂತರ ಬಸ್‌ ನಿಲ್ದಾಣದಲ್ಲಿ ಪಾರ್ಕಿಂಗ್‌ ಸಮಸ್ಯೆ‌

  |   Mysorenews

ಮೈಸೂರು: ಪ್ರತಿನಿತ್ಯ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡುವವರು ತಮ್ಮ ವಾಹನಗಳನ್ನು ಬಸ್‌ ನಿಲ್ದಾಣದಲ್ಲಿ ನಿಲ್ಲಿಸಲು ಸ್ಥಳಾವಕಾಶವಿಲ್ಲದೇ ಪರದಾಡುವ ಸ್ಥಿತಿ ಒಂದೆಡೆಯಾದರೆ, ಚಿಕ್ಕದಾದ ನಿಲ್ದಾಣದಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

ಮೈಸೂರಿನ ಗ್ರಾಮಾಂತರ ಬಸ್‌ ನಿಲ್ದಾಣದಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಕರು ಉದ್ಯೋಗಕ್ಕೆ ಬೇರೆ ಊರುಗಳಿಗೆ ತೆರಳಿ ವಾಪಸ್ಸಾಗುವುದಿದೆ. ಆದರೆ, ಪ್ರಯಾಣಿಕರು ತಾವು ತಂದ ಬೈಕ್‌, ಸ್ಕೂಟರ್‌ಗಳನ್ನು ನಿಲ್ದಾಣದಲ್ಲಿ ನಿಲ್ಲಿಸಲು ಸ್ಥಳವಿಲ್ಲದೇ ಸಮಸ್ಯೆ ಎದುರಿಸುವಂತಾಗಿದೆ.

ಜೊತೆಗೆ ನಗರದ ಹೃದಯ ಭಾಗದಲ್ಲಿ ನಿರ್ಮಾಣವಾಗಿರುವ ಈ ಗ್ರಾಮಾಂತರ ಬಸ್‌ ನಿಲ್ದಾಣಲ್ಲಿ ಸ್ಥಳವಕಾಶ ಸಮಸ್ಯೆ ಎದುರಾಗಿದ್ದು, ದಿನೆ ದಿನೇ ವಾಹನ ಹಾಗೂ ಜನದಟ್ಟಣೆ ಹೆಚ್ಚಾಗುತ್ತಿದೆ.

1500 ವಾಹನ ನಿಲುಗಡೆ: ಮೈಸೂರು ಗ್ರಾಮಾಂತರ ಬಸ್‌ ನಿಲ್ದಾಣದಿಂದ ವಿವಿಧ ಸ್ಥಳಗಳಿಗೆ ನಿತ್ಯ ಸಾವಿರಕ್ಕೂ ಹೆಚ್ಚಿನ ಬಸ್‌ಗಳು ಸಂಚಾರ ನಡೆಸುತ್ತವೆ. ಜೊತೆಗೆ ಸಾವಿರಾರು ಪ್ರಯಾಣಿಕರು ನಿತ್ಯ ಪ್ರಯಾಣಿಸುತ್ತಾರೆ. ಈ ಪೈಕಿ ಬೆಂಗಳೂರು ಸೇರಿದಂತೆ ವಿವಿಧ ಊರುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮೈಸೂರಿನಲ್ಲಿ ವಾಸವಿರುವ 4 ಸಾವಿರ ಪ್ರಯಾಣಿಕರು ನಿತ್ಯವೂ ಸಂಚರಿಸುತ್ತಾರೆ.

ಇವರಲ್ಲಿ ಬಹುತೇಕ ಪ್ರಯಾಣಿಕರು ಬಸ್‌ ನಿಲ್ದಾಣದಲ್ಲಿ ತಮ್ಮ ಬೈಕ್‌, ಸ್ಕೂಟರ್‌ಗಳನ್ನು ಪಾರ್ಕಿಂಗ್‌ ಮಾಡಿ ನಂತರ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಆದರೆ, ಬಸ್‌ ನಿಲ್ದಾಣದ ತಳ ಅಂತಸ್ತಿನಲ್ಲಿ ಮಾಡಿರುವ ಪಾರ್ಕಿಂಗ್‌ನಲ್ಲಿ ಕೇವಲ 1500 ವಾಹನಗಳನ್ನು ನಿಲ್ಲಿಸಬಹುದಾಗಿದೆ. ಹೀಗಾಗಿ, ಬಹುತೇಕ ಪ್ರಯಾಣಿಕರು ತಮ್ಮ ಬೈಕ್‌ಗಳನ್ನು ನಿಲ್ಲಿಸಲು ಜಾಗದ ಸಮಸ್ಯೆಯಿಂದ ಪರದಾಡುವಂತಾಗಿದೆ....

ಫೋಟೋ - http://v.duta.us/dnFjBgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/5xznbAAA

📲 Get Mysore News on Whatsapp 💬