[mysore] - ನೀರಿನ ಸಮಸ್ಯೆ ಬಾರದಂತೆ ಕಟ್ಟೆಚ್ಚರವಹಿಸಿ

  |   Mysorenews

ಹುಣಸೂರು: ನಗರ ಸೇರಿದಂತೆ ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಶಾಸಕ ಎಚ್‌.ವಿಶ್ವನಾಥ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು. ನಗರಸಭಾ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ದೂರು ತರಬೇಡಿ: ತಾಲೂಕಿನ ಕೆಲವೆಡೆ ಅಂತರ್ಜಲ ಮಟ್ಟ ಕುಸಿದಿದ್ದರೆ, ಹನಗೋಡು ಹೋಬಳಿಯಲ್ಲಿ ಮಳೆ-ಬಿರುಗಾಳಿಯಿಂದ ವಿದ್ಯುತ್‌ ಕಂಬಗಳು ನೆಲಕ್ಕುರುಳಿರುವ ಪರಿಣಾಮ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿದೆ. ಇದರಿಂದಾಗಿ ಕುಡಿಯುವ ನೀರಿನ ಪೂರೈಕೆಯಲ್ಲಿ ಅಡ್ಡಿಯುಂಟಾಗಿದೆ. ಆದರೆ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯವಿರುವೆಡೆಗಳಲ್ಲಿ ಟ್ಯಾಂಕರ್‌ ಮೂಲಕ ಸರಬರಾಜು ಮಾಡಬೇಕು. ಯಾವುದೇ ದೂರು ಬಾರದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು.

ತರಾಟೆ: ಹುಣಸೂರು ನಗರದಲ್ಲಿ ವರ್ಷದ ಹಿಂದೆಯೇ ಸ್ಥಾಪಿತಗೊಂಡ 7 ಶುದ್ಧ ಕುಡಿಯುವ ನೀರಿನ ಘಟಕಗಳಿಗೆ 40 ಲಕ್ಷ ರೂ.ವೆಚ್ಚದಲ್ಲಿ ಬೋರ್‌ವೆಲ್‌ ಕೊರೆಯಿಸಿ ಘಟಕಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿತ್ತು. ಬೋರ್‌ವೆಲ್‌ಗ‌ಳನ್ನು ಕೊರೆಯಿಸಲಾಗಿದೆ. ಆದರೆ 6 ತಿಂಗಳುಗಳೇ ಕಳೆದಿದ್ದರೂ ಈ ಬೋರ್‌ವೆಲ್‌ಗ‌ಳಿಗೆ ವಿದ್ಯುತ್‌ ಸಂಪರ್ಕ ನೀಡಿಲ್ಲ, ಯಾವ ಸೀಮೆ ಕೆಲಸ ಮಾಡುತ್ತೀರಾ ಎಂದು ಶಾಸಕರು ತರಾಟೆಗೆ ತೆಗೆದುಕೊಂಡರು....

ಫೋಟೋ - http://v.duta.us/Lwz5iQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/HvU9bAAA

📲 Get Mysore News on Whatsapp 💬