[shimoga] - ಬಿಸಿಲು ನಾಡಾದ ಮಲೆನಾಡು!

  |   Shimoganews

ಶಿವಮೊಗ್ಗ: ಇಲ್ಲಿಯ ಬಿಸಿಲು ಬಯಲು ಸೀಮೆ ಬಳ್ಳಾರಿ ಬಿಸಿಲನ್ನೂ ಮೀರಿಸುವಂತಿದೆ. ಕಳೆದ ಒಂದು ತಿಂಗಳಿಂದ ಬಿಸಿಲಿನ ಝಳಕ್ಕೆ ಜನ ನಲುಗಿ ಹೋಗಿದ್ದಾರೆ. ಬೆಳಗ್ಗೆ 9 ಗಂಟೆ ಹೊತ್ತಿಗೆ ಆರಂಭವಾಗುವ ಬಿಸಿಲ ಝಳ ಸಂಜೆ 5 ಗಂಟೆಯಾದರೂ ಕಡಿಮೆಯಾಗುತ್ತಿಲ್ಲ. ರಾತ್ರಿ ಕೂಡ ಬಿಸಿ ಗಾಳಿಗೆ ಜನ ಹೈರಾಣಾಗಿದ್ದಾರೆ. ಜಿಲ್ಲೆಯ ಸರಾಸರಿ ಉಷ್ಣಾಂಶ 38.7 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದರೆ, ಶಿವಮೊಗ್ಗ ನಗರದಲ್ಲಿ ಶನಿವಾರ ಈ ವರ್ಷದ ಗರಿಷ್ಠ ತಾಪಮಾನ 39.5 ಡಿಗ್ರಿ ದಾಖಲಾಗಿದೆ.

ಏ.23ರಿಂದ ಜಿಲ್ಲೆಯ ಸರಾಸರಿ ಉಷ್ಣಾಂಶ ನಿರಂತರವಾಗಿ 38.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗುತ್ತಿದೆ. ಒಂದು ಕಾಲದಲ್ಲಿ ಮಲೆನಾಡು ಸದಾ ತಂಪಾಗಿರುತ್ತಿತ್ತು. ವರ್ಷದಲ್ಲಿ ಸತತ ಏಳು ತಿಂಗಳ ಮಳೆ, ಸಮೃದ್ಧ ಹಸಿರು ಹೊದ್ದು ಮಲಗಿರುತ್ತಿದ್ದ ದಟ್ಟ ಅರಣ್ಯದಿಂದ ಎಂತಹ ಬೇಸಿಗೆಯಾದರೂ ವಾತಾವರಣ ತಂಪು ತಂಪಾಗಿರುತ್ತಿತ್ತು. ಈಗ ಪರಿಸ್ಥಿತಿ ತಿರುವು ಮುರುವಾಗಿದೆ. ಮಲೆನಾಡು ಬಿಸಿಲ ನಾಡಾಗಿದೆ.

ನಡು ಮಧ್ಯಾಹ್ನದ ಹೊತ್ತಿಗೆ ನೆತ್ತಿ ಮೇಲೆ ಕಾದ ಕಬ್ಬಿಣದಂತೆ ಬರೆ ಹಾಕುತ್ತಿದೆ. ಝಳಕ್ಕೆ ಹೆದರಿ ಜನ ಮಧ್ಯಾಹ್ನ ಹೊರಗೆ ಬರುತ್ತಿಲ್ಲ. ಉಷ್ಣಾಂಶ ಮತ್ತು ಧ‌ಗೆ ಹೆಚ್ಚಳದಿಂದ ದೇಹಕ್ಕೆ ಬೆಂಕಿ ಬಿದ್ದಂತಾಗಿದೆ. ಧಗೆ ಕಡಿಮೆ ಮಾಡಿಕೊಳ್ಳಲು ಫ್ಯಾನ್‌ ಗಾಳಿಗೆ ಮೈಯೊಡ್ಡಿದರೆ ಬಿಸಿ ಗಾಳಿಯೇ ಬರುತ್ತಿದೆ. ಝಳದಿಂದ ಜನರು ಅನಾರೋಗ್ಯಕ್ಕೆ ಒಳಗಾಗುವುದು ಹೆಚ್ಚಾಗುತ್ತಿದೆ....

ಫೋಟೋ - http://v.duta.us/xwFWmAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/hc--9wAA

📲 Get Shimoga News on Whatsapp 💬