[udupi] - “ಕನ್ನಡ ಮಾಧ್ಯಮ ಶಾಲೆ ಉಳಿಸುವಲ್ಲಿ ದಾನಿಗಳ ಕೊಡುಗೆ ಸ್ಮರಣೀಯ’

  |   Udupinews

ಶಿರ್ವ: ಹೆತ್ತವರಿಗೆ ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಕಲಿಯದಿದ್ದರೆ ಮುಂದಿನ ವಿದ್ಯಾಭ್ಯಾಸಕ್ಕೆ ತೊಡಕು ಬರುತ್ತದೆ ಎಂಬ ಭಾವನೆ ಇದೆ. ಆದರೆ ಆಂಗ್ಲ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗಿಂತ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯ ಎತ್ತರದ ಗುಣವಿದೆ. ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಇತಿಹಾಸ ಸೃಷ್ಠಿಸಿ ಶತಮಾನ ಕಂಡಿರುವ ಹಿಂದೂ ಹಿ. ಪ್ರಾ.ಕನ್ನಡ ಮಾಧ್ಯಮ ಶಾಲೆಯನ್ನು ಉಳಿಸಿ ಬೆಳೆಸುವಲ್ಲಿ

ದಾನಿಗಳ,ಹಳೆವಿದ್ಯಾರ್ಥಿಗಳ,ಹೆತ್ತವರ ಕೊಡುಗೆ ಸ್ಮರಣೀಯವಾಗಿದೆ ಎಂದು ನಿಟ್ಟೆ ವಿ.ವಿ.ಯ ಕುಲಾಧಿಪತಿ, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎನ್‌. ವಿನಯ ಹೆಗ್ಡೆ ಹೇಳಿದರು.

ಅವರು ಶತಮಾನೋತ್ಸವ ಸಂಭ್ರಮ ಆಚರಣೆಯ ಪ್ರಯುಕ್ತ ಹಿಂದೂ. ಹಿ. ಪ್ರಾ.ಶಾಲೆಯ ನವೀಕರಣಗೊಂಡ ಹೇಮಲತಾ ಶಂಭು ಶೆಟ್ಟಿ ವೇದಿಕೆಯನ್ನು ಉದ್ಘಾಟಿಸಿ ಬಳಿಕ ನಡೆದ ಶತಮಾನೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ,ಮಾಜಿ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಮಾತನಾಡಿ ಸಂವಿಧಾನದಲ್ಲಿ ವಿದ್ಯೆ ಮತ್ತು ಆರೋಗ್ಯವನ್ನು ಜನರಿಗೆ ಒದಗಿವುದು ಸರಕಾರದ ಜವಾಬ್ದಾರಿ ಎಂದು ಒಪ್ಪಿಕೊಂಡಿದೆಯಾದರೂ ದೇಶದಲ್ಲಿ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾದಾನ ನೀಡುತ್ತಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವ ಆಡಳಿತ ಮಂಡಳಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯೂ ಇದೆ ಎಂದು ಹೇಳಿದರು....

ಫೋಟೋ - http://v.duta.us/EhleJwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/_aUTygAA

📲 Get Udupi News on Whatsapp 💬