ಅಂಜನಾ ವಸಿಷ್ಠ ಕೊಲೆ: “ಮದುವೆ ನಿರಾಕರಿಸಿದ್ದು ಕೊಲೆಗೆ ಕಾರಣ’

  |   Dakshina-Kannadanews

ಮಂಗಳೂರು: ಅತ್ತಾವರದ ಬಾಡಿಗೆ ಮನೆಯಲ್ಲಿ ಶುಕ್ರವಾರ ನಡೆದಿದ್ದ ವಿದ್ಯಾರ್ಥಿನಿ ಅಂಜನಾ ವಸಿಷ್ಠ (22) ಕೊಲೆ ಪ್ರಕರಣದ ಆರೋಪಿ ವಿಜಯಪುರ ಜಿಲ್ಲೆ ಸಿಂಧಗಿಯ ಸಂದೀಪ್‌ ರಾಥೋಡ್‌ (24) ನನ್ನು ಪೊಲೀಸರು ರವಿವಾರ ಮಂಗಳೂರಿಗೆ ಕರೆ ತಂದು ಕೊಲೆ ನಡೆದ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. ಬಳಿಕ ನ್ಯಾಯಾಧೀಶರ ಮನೆಗೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೊಲೆ ಆಕಸ್ಮಿಕ

ಅಂಜನಾ ಮತ್ತು ತಾನು 2018 ಜುಲೈ ತಿಂಗಳಲ್ಲಿ ಫೇಸ್‌ಬುಕ್‌ ಮೂಲಕ ಪರಿಚಯವಾಗಿದ್ದೆವು. ದಿನ ಕಳೆದಂತೆ ಪರಿಚಯ ಪ್ರೇಮಕ್ಕೆ ತಿರುಗಿತ್ತು. ಮಂಗಳೂರಿನಲ್ಲಿ ಆಗಾಗ ಬಂದು ಭೇಟಿಯಾಗುತ್ತಿದ್ದೆವು. ಮದುವೆಯಾಗಲು ಇಚ್ಛಿಸಿದ್ದೆವು. ಆದರೆ ಆಕೆ ಮನೆಯಲ್ಲಿ ಬೇರೆ ಮದುವೆ ಮಾಡಲು ಗಂಡು ಹುಡುಕಿದ್ದಾರೆ. ನನ್ನನ್ನು ಮರೆತು ಬಿಡು ಎಂದು ಆಕೆ ಹೇಳಿದ್ದಾಳೆ. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟವಾಗಿದೆ. ಸಿಟ್ಟಿನ ಭರದಲ್ಲಿ ಆಕಸ್ಮಿಕವಾಗಿ ಆಕೆಯ ಕೊಲೆ ನಡೆದು ಹೋಗಿದೆ ಎಂದು ಸ್ಥಳ ಮಹಜರು ನಡೆಸಿದಾಗ ಆತ ಪೊಲೀಸರಿಗೆ ವಿವರಿಸಿದ್ದಾನೆ.

ಜತೆಗಿರಲು ನಿರ್ಧರಿಸಿದ್ದರು

ಅಂಜನಾ ಎಂಎಸ್ಸಿ ಪದವಿ ಮುಗಿದ ಬಳಿಕ ಮಂಗಳೂರಿನಲ್ಲಿ ಬ್ಯಾಂಕಿಂಗ್‌ ಕೋಚಿಂಗ್‌ ಹಾಗೂ ಸಂದೀಪ್‌ ರಾಥೋಡ್‌ ಪಿಎಸ್‌ಐ ಪರೀಕ್ಷೆಗೆ ಕೋಚಿಂಗ್‌ ಪಡೆಯಲು ಬಂದು ಬಾಡಿಗೆ ಮನೆಯಲ್ಲಿ ಜತೆಗೆ ವಾಸ ಮಾಡುವ ಬಗ್ಗೆ ಮೊದಲೇ ನಿರ್ಧರಿಸಿದ್ದರು. ಆದರೆ ಕೊನೆ ಹಂತದಲ್ಲಿ ಮನೆಯವರು ನೋಡಿದ ಹುಡುಗನ ಜತೆ ವಿವಾಹವಾಗಲು ನಿರ್ಧರಿಸಿ ಈ ವಿಷಯವನ್ನು ರಾಥೋಡ್‌ ಜತೆ ಹಂಚಿಕೊಂಡದ್ದೇ ಆಕೆಯ ಕೊಲೆಗೆ ಕಾರಣವಾಗಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ....

ಫೋಟೋ - http://v.duta.us/4obqOQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/XUnY2wAA

📲 Get Dakshina Kannada News on Whatsapp 💬