ಆಂಗ್ಲ ಮಾಧ್ಯಮ ನಿಲುವು ಪುನರ್‌ ಪರಿಶೀಲಿಸಿ

  |   Bangalore-Citynews

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಪ್ರಾರಂಭಿಸಿರುವ ರಾಜ್ಯ ಸರ್ಕಾರ ತನ್ನ ನಿಲುವನ್ನು ಪುನರ್‌ ಪರಿಶೀಲಿಸಬೇಕು ಪದ್ಮಶ್ರೀ ಪುರಸ್ಕೃತ ಸಾಹಿತಿ ಡಾ.ದೊಡ್ಡರಂಗೇಗೌಡ ಒತ್ತಾಯಿಸಿದರು.

ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್‌ ಹಾಗೂ ಕರ್ನಾಟಕ ಪ್ರತಿಭಾ ಕೇಂದ್ರ ಸಂಯುಕ್ತಾಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಭಾನುವಾರ ನಡೆದ ಅಂಕಣಕಾರ ಡಾ.ಕೆ.ಪಿ.ಪುತ್ತೂರಾಯರ “ಬಾಗಿನ’ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಪ್ರಾರಂಭಿಸಿರುವ ರಾಜ್ಯ ಸರ್ಕಾರ ತನ್ನ ನಿಲುವು ಸಮಂಜಸವಲ್ಲ.

ಕನ್ನಡ ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕ್ರಮವನ್ನು ಸರ್ಕಾರ ಮತ್ತೂಮ್ಮೆ ಪರಿಶೀಲಿಸುವುದ ಅತ್ಯಗತ್ಯ. ಇನ್ನು ರಾಜ್ಯ ಸರ್ಕಾರವು ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಭಾಷೆಯ ಪರವಾಗಿಲ್ಲದಿರುವುದು ನೋವಿನ ಸಂಗತಿಯಾಗಿದೆ. ಈ ವಿಚಾರ ಕುರಿತು ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆಯಾಗಬೇಕಿದೆ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮನು ಬಳಿಗಾರ್‌ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಕಾರ್ಯವಾಗಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನುಬಳಿಗಾರ್‌ ಮಾತನಾಡಿ, ಜೀವನದಲ್ಲಿ ಮನುಷ್ಯ ಎತ್ತರಕ್ಕೇರಬೇಕೆಂದರೆ ಅಧ್ಯಯನದ ಆಳಕ್ಕಿಳಿಯಬೇಕು ಎಂದು ತಿಳಿಸಿದರು.ಅಧ್ಯಯನಶೀಲತೆ ಒಂದೇ ಮನುಷ್ಯನಿಗೆ ಸಾಧನೆ ಹಾದಿ ತೋರುತ್ತದೆ. ಧರ್ಮ, ಜಾತಿ, ಸಿದ್ಧಾಂತಕ್ಕಿಂತ ದೇಶ ಮುಖ್ಯ....

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/E0wj-gAA

📲 Get Bangalore City News on Whatsapp 💬