ಕಾರ್ನಾಡ್ ಇನ್ನಿಲ್ಲ; ಸಾರ್ವಜನಿಕರಿಗೆ ಚಿತಾಗಾರದಲ್ಲೇ ಅಂತಿಮ ದರ್ಶನ, 3 ದಿನ ಶೋಕಾಚರಣೆ

  |   Karnatakanews

ಬೆಂಗಳೂರು:ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೈಯಪ್ಪನಹಳ್ಳಿಯ ಮುಖ್ಯರಸ್ತೆ ಸಮೀಪ ಇರುವ ಕಲ್ಲಹಳ್ಳಿ ವಿದ್ಯುತ್ ಚಿತಾಗಾರದಲ್ಲೇ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 2ಗಂಟೆಯಿಂದ 3ಗಂಟೆವರೆಗೆ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಗಿರೀಶ್ ಕಾರ್ನಾಡ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಿದ್ದು, ಮೂರು ದಿನಗಳ ಕಾಲ ಶೋಕಾಚರಣೆ ನಡೆಯಲಿದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾರ್ವಜನಿಕರು ಅಂತಿಮ ದರ್ಶನ ಪಡೆದ ನಂತರ ಯಾವುದೇ ವಿಧಿವಿಧಾನಗಳಿಲ್ಲದೆ ಕಾರ್ನಾಡ್ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಈಗಾಗಲೇ ಸಾಹಿತಿಗಳು, ಗಣ್ಯರು ಸೇರಿದಂತೆ ನೂರಾರು ಜನರು ಕಾರ್ನಾಡ್ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಪ್ರಧಾನಿ ಮೋದಿ ಸಂತಾಪ:

ಗಿರೀಶ್ ಕಾರ್ನಾಡ್ ಅವರು ಎಲ್ಲಾ ಭಾಷೆಗಳಲ್ಲಿಯೂ ಅಭಿನಯಿಸಿದ ಬಹುಮುಖ ಪ್ರತಿಭೆಯ ಕಲಾವಿದ. ನಿಷ್ಠುರವಾದಿ, ಖ್ಯಾತ ಸಾಹಿತಿಯಾಗಿ ಜನಾನುರಾಗಿಯಾಗಿದ್ದರು. ಆಕಸ್ಮಿಕ ನಿಧನದಿಂದ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಫೋಟೋ - http://v.duta.us/LnglJgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/y1nmTAAA

📲 Get Karnatakanews on Whatsapp 💬