ಕೆರೆ ಭರ್ತಿ ಯೋಜನೆಗೆ ಮಂಜೂರಾತಿ ನೀಡಿ

  |   Chikkamagalurunews

ಚಿಕ್ಕಮಗಳೂರು: ಜಿಲ್ಲೆಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಕೆರೆ ತುಂಬಿಸುವ ಯೋಜನೆಗೆ ಮಂಜೂರಾತಿ ನೀಡಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಶಾಸಕ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಶಾಶ್ವತ ಕುಡಿಯುವ ನೀರು ಒದಗಿಸಲು ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಮಂಜೂರಾತಿ ನೀಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ತುಂಗಾ, ಭದ್ರಾ, ನೇತ್ರಾವತಿ, ಹೇಮಾವತಿ, ವೇದಾವತಿ ನದಿಗಳು ಉಗಮವಾಗಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ನೀರುಣಿಸುವ ಜೀವನದಿಗಳಾಗಿವೆ. ಇಂತಹ ಮಲೆನಾಡು, ಅರೆಮಲೆನಾಡು, ಬಯಲುಸೀಮೆಯನ್ನು ಹೊಂದಿರುವ ಜಿಲ್ಲೆಗೆ ಕುಡಿಯುವ ನೀರಿನ ತೊಂದರೆ ಉಂಟಾಗಿದೆ. ಕಳೆದ 5-6 ವರ್ಷಗಳಿಂದ ತೀವ್ರ ಬರಗಾಲ ಕಾಡುತ್ತಿದ್ದು, ನೂರಾರು ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ನೀರು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿಯಲ್ಲಿ ಹೇಳಿದ್ದಾರೆ.

ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಾದ ಭದ್ರಾನದಿಗೆ ಲಕ್ಕವಳ್ಳಿಯ ಗೋಂಧಿ ಬಳಿ ಚೆಕ್‌ ಡ್ಯಾಂ ನಿರ್ಮಿಸಿ, ಕೆರೆ ತುಂಬಿಸುವ ಯೋಜನೆಗೆ ಈಗಾಗಲೇ ಸಮಗ್ರ ಯೋಜನಾ ವರದಿ ತಯಾರಾಗಿದೆ. ಈ ಯೋಜನೆಗೆ ಅಗತ್ಯ ಅನುದಾನದೊಂದಿಗೆ ಮಂಜೂರಾತಿ ನೀಡಬೇಕು ಎಂದು ಕೋರಿದರು....

ಫೋಟೋ - http://v.duta.us/jAFR7QAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/PIcKdAAA

📲 Get Chikkamagaluru News on Whatsapp 💬