ಚಾಮರಾಜನಗರದಲ್ಲಿ ಕಾನೂನು ಕಾಲೇಜು ಆರಂಭ

  |   Chamarajanagarnews

ಚಾಮರಾಜನಗರ: ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿದ್ದ ಕಾನೂನು ಕಾಲೇಜು ಪ್ರಸಕ್ತ ಸಾಲಿನಿಂದಲೇ ಆರಂಭವಾಗಲಿದ್ದು, ನಗರದ ಹಿಂದಿನ ಕೇಂದ್ರೀಯ ವಿದ್ಯಾಲಯದ ಕಟ್ಟಡದಲ್ಲಿ ಕಾರ್ಯಾರಂಭ ಮಾಡಲಿದೆ.

ರಾಜ್ಯ ಸರ್ಕಾರ ಈ ಸಾಲಿನಿಂದಲೇ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಪ್ರಸಕ್ತ ಸಾಲಿನಿಂದಲೇ 3- 5 ವರ್ಷದ ಕಾನೂನು ತರಗತಿ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಒಟ್ಟಾರೆ ಕಾಲೇಜು ಸ್ಥಾಪನೆಗೆ 3.14 ಕೋಟಿ ರೂ. ವೆಚ್ಚವಾಗಲಿದೆ.

ಕಾಲೇಜು ಕಟ್ಟಡವನ್ನು ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸ್ಥಳೀಯ ಪರಿಶೀಲನಾ ಸಮಿತಿ ಪರಿಶೀಲಿಸಲಿದೆ. ಇದಕ್ಕಾಗಿ ಎಲ್ಲಾ ಅಗತ್ಯ ಮೂಲ ಸೌಕರ್ಯದೊಂದಿಗೆ ಕಟ್ಟಡವನ್ನು ಸಜ್ಜುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬಾರ್‌ ಕೌನ್ಸಿಲ್‌ ಆಫ್ ಇಂಡಿಯಾ ಪರಿಷತ್ತು ಕೂಡ ಭೇಟಿ ಕೊಟ್ಟು ಮಾನ್ಯತೆ ನೀಡಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಿದ್ಧತಾ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ನಗರದ ರೇಷ್ಮೆ ಇಲಾಖೆ ಕಟ್ಟಡ ಅಂದರೆ ಈ ಹಿಂದೆ ಕೇಂದ್ರೀಯ ವಿದ್ಯಾಲಯ ಇದ್ದ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾನೂನು ಕಾಲೇಜಿನ ತರಗತಿ ಆರಂಭವಾಗಲಿದೆ. ಸ್ವಂತ ಕಟ್ಟಡವನ್ನು ಮುಂದೆ ಎಡಬೆಟ್ಟ ಬಳಿಯ ಸರ್ಕಾರಿ ವೈದ್ಯಕೀಯ ಕಾಲೇಜಿನ ಬಳಿ 5 ಎಕರೆ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ....

ಫೋಟೋ - http://v.duta.us/kVHGewAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/I7L6nAAA

📲 Get Chamarajanagar News on Whatsapp 💬