ಪಬ್ಲಿಕ್‌ ಶಾಲಾ ಕೊಠಡಿ ನಿರ್ಮಾಣಕ್ಕೆ 1.99 ಕೋಟಿ ರೂ.

  |   Kolar-Karnatakanews

ಮಾಸಿ: ಕರ್ನಾಟಕ ಪಬ್ಲಿಕ್‌ ಶಾಲೆಯ 1.99 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತ ಕೊಠಡಿ ನಿರ್ಮಾಣ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಆವರಣದಲ್ಲಿ ಆರ್‌ಐಡಿಎಫ್, ಆರ್‌ಎಂಎಸ್‌ಎ ಯೋಜನೆಯಡಿ ಕರ್ನಾಟಕ ಪಬ್ಲಿಕ್‌ ಸ್ಕೂಲ್ನ ನೂತನ ಕೊಠಡಿಗಳ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್ಗೆ ಆರ್‌ಐಡಿಎಫ್, ಆರ್‌ಎಂಎಸ್‌ಎ ಯೋಜನೆಯಡಿ 1.99 ಕೋಟಿ ರೂ. ಅನುದಾನ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದು, ಸುಸಜ್ಜಿತ ಶಾಲಾ ಕಟ್ಟಡಗಳು ನಿರ್ಮಾಣವಾಗಲಿದೆ. ಗ್ರಾಮೀಣ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಲು ಅನುಕೂಲವಾಗಲಿದೆ ಎಂದ ಅವರು, ಗುಣಮಟ್ಟದ ಕಟ್ಟಡ ನಿರ್ಮಿಸಿಕೊಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

14 ಕೊಠಡಿ ನಿರ್ಮಾಣ: ಕರ್ನಾಟಕ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲ ರಾಮಚಂದ್ರಪ್ಪ ಮಾತನಾಡಿ, ಶಾಲೆಗೆ 1.99 ಕೋಟಿ ರೂ. ಅನುದಾನದಲ್ಲಿ ಕೊಠಡಿಗಳು ನಿರ್ಮಾಣವಾಗಲಿದ್ದು, ಒಂದೇ ಸೂರಿನಡಿಯಲ್ಲಿ 3 ಹಂತಸ್ತುಗಳಲ್ಲಿ 14 ಕೊಠಡಿಗಳು ನಿರ್ಮಾಣವಾಗಲಿದೆ. ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು....

ಫೋಟೋ - http://v.duta.us/mtLUUAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/KF0hIQAA

📲 Get Kolar Karnataka News on Whatsapp 💬