ಸಂಪುಟ ವಿಸ್ತರಣೆ ವೇಳೆ ಫಾರೂಕ್‌ಗೆ ಸಚಿವ ಸ್ಥಾನ?

  |   Karnatakanews

ಮಂಗಳೂರು: ರಾಜ್ಯ ಸಂಪುಟ ವಿಸ್ತರಣೆ ವೇಳೆ ಜೆಡಿಎಸ್‌ ಕೋಟಾದಲ್ಲಿ ವಿಧಾನಪರಿಷತ್‌ ಸದಸ್ಯ ಹಾಗೂ ಜೆಡಿಎಸ್‌ ಮಹಾಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್‌ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದ್ದು, ಕರಾವಳಿಗೆ ಇನ್ನೊಂದು ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್‌ನಿಂದ ಮಂಗಳೂರು ಶಾಸಕ ಯು.ಟಿ.ಖಾದರ್‌ ಈಗಾಗಲೇ ಸಚಿವರಾಗಿದ್ದಾರೆ.

ಜೆಡಿಎಸ್‌ ಕೋಟಾದಲ್ಲಿ ಎರಡು ಸಚಿವರ ಸೇರ್ಪಡೆಗೆ ಅವಕಾಶವಿರುವುದರಿಂದ ಒಂದು ಸ್ಥಾನವನ್ನು ಪಕ್ಷೇತರರಿಗೆ ನೀಡಲು ಎಚ್‌.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಇನ್ನೊಂದು ಸ್ಥಾನವನ್ನು ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡುವ ಬಗ್ಗೆ ಚರ್ಚೆಗಳು ನಡೆದಿವೆ. ಪ್ರಸ್ತುತ ಸಂಪುಟದಲ್ಲಿ ಜೆಡಿಎಸ್‌ನಿಂದ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ದೊರಕಿಲ್ಲ. ಕಾಂಗ್ರೆಸ್‌ನಿಂದ ಯು.ಟಿ. ಖಾದರ್‌ ಹಾಗೂ ಜಮೀರ್‌ ಅಹಮ್ಮದ್‌ ಸಚಿವರಾಗಿದ್ದಾರೆ. ಈ ನೆಲೆಯಲ್ಲಿ ಬಿ.ಎಂ.ಫಾರೂಕ್‌ ಹೆಸರು ಚಾಲ್ತಿಯಲ್ಲಿದೆ.

ಎಚ್‌.ಡಿ.ದೇವೆಗೌಡ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಆಪ್ತರಾಗಿರುವ ಫಾರೂಕ್‌, ಪಕ್ಷ ಸಂಘಟನೆಯಲ್ಲಿ ನಿರಂತರ ಸಹಯೋಗ ನೀಡುತ್ತಾ ಬಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಚುನಾವಣಾ ಕಾರ್ಯತಂತ್ರ ರೂಪಿಸುವ ತಂಡದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.

ಮೈತ್ರಿ ಸರಕಾರ ರಚನೆ ಸಂದರ್ಭದಲ್ಲಿ ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಅವಕಾಶ ನೀಡುವ ನಿಟ್ಟಿನಲ್ಲೂ ಫಾರೂಕ್‌ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲು ದೇವೇಗೌಡ ಹಾಗೂ ಕುಮಾರಸ್ವಾಮಿ ಚಿಂತನೆ ನಡೆಸಿದ್ದರು. ಆದರೆ, ಮೈತ್ರಿ ಪಕ್ಷಗಳ ನಡುವೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡುವ ಲೆಕ್ಕಾಚಾರದಲ್ಲಿ ಫಾರೂಕ್‌ಗೆ ಅವಕಾಶ ತಪ್ಪಿ ಹೋಗಿತ್ತು.

ಫೋಟೋ - http://v.duta.us/lHiXFAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/Z8nASwAA

📲 Get Karnatakanews on Whatsapp 💬