ಸಮನ್ವಯ ಸಮಿತಿಗೆ ಖರ್ಗೆ?

  |   Karnatakanews

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್‌ನಲ್ಲೀಗ ಹುದ್ದೆಗಳ ಬದಲಾವಣೆಯದ್ದೇ ಚರ್ಚೆ ನಡೆಯುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋಲಿನ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿಯೂ ಪಕ್ಷದ ಹೀನಾಯ ಸೋಲಿನ ಪರಿಣಾಮ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರ ಹುದ್ದೆ ಬದಲಾಯಿಸಬೇಕೆಂಬ ಕೂಗು ಕೇಳಿ ಬರುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಮನ್ವಯ ಸಮಿತಿ ಜವಾಬ್ದಾರಿ ನೀಡಬೇಕೆಂಬ ಬೇಡಿಕೆ ಜೀವ ಪಡೆದುಕೊಳ್ಳುತ್ತಿದೆ.

ರಾಜ್ಯದಲ್ಲಿ ಕೇವಲ ಒಂದು ಸಂಸತ್‌ ಸ್ಥಾನ ಪಡೆದು ಹೀನಾಯ ಸೋಲು ಕಂಡಿರುವುದರಿಂದ, ಪಕ್ಷದ ಹಿರಿಯ ನಾಯಕರಾಗಿರುವ ಮಾಜಿ ಸಚಿವ ರೋಷನ್‌ಬೇಗ್‌ ಹಾಗೂ ರಾಮಲಿಂಗಾ ರೆಡ್ಡಿ ಬಹಿರಂಗವಾಗಿಯೇ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿರುದ್ಧ ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ. ರೋಷನ್‌ ಬೇಗ್‌ ಅವರಂತೂ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕತ್ವವನ್ನೇ ಪ್ರಶ್ನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ರನ್ನು ಕಟುವಾಗಿ ಟೀಕಿಸಿದ್ದರು....

ಫೋಟೋ - http://v.duta.us/DjBiGwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/jRqE0gAA

📲 Get Karnatakanews on Whatsapp 💬