ಸರ್ಕಾರ ಸ್ಪಂದಿಸದಿದ್ದರೆ ನಿರಂತರ ಧರಣಿ: ವಾಲ್ಮೀಕಿ ಶ್ರೀ

  |   Karnatakanews

ಹರಿಹರ: ಪರಿಶಿಷ್ಟ ಪಂಗಡದ ಮೀಸಲು ಹೆಚ್ಚಳಕ್ಕೆ ಆಗ್ರಹಿಸಿ ರಾಜನಹಳ್ಳಿಯಿಂದ ಬೆಂಗಳೂರಿಗೆ ಹಮ್ಮಿಕೊಂಡಿರುವ ಪಾದಯಾತ್ರೆಗೆ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಭಾನುವಾರ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು ಚಾಲನೆ ನೀಡಿದರು.

ಮಠದ ಆವರಣದಲ್ಲಿರುವ ಲಿಂ| ಪುಣ್ಯಾನಂದಪುರಿ ಶ್ರೀಗಳ ಕರ್ತೃ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರ ಪಾದಯಾತ್ರೆಗೆ ಚಾಲನೆ ನೀಡಿದ ಅವರು, “ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಪಂಗಡಕ್ಕೆ ಅಗತ್ಯ ಮೀಸಲಾತಿ ಕಲ್ಪಿಸುವುದು ಸರ್ಕಾರದ ಕರ್ತವ್ಯ. ಕೂಡಲೇ ಎಸ್ಟಿ ವರ್ಗದ ಮೀಸಲಾತಿಯನ್ನು ಶೇ.3 ರಿಂದ ಶೇ 7.5ಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

ಎಸ್ಟಿ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದರೂ ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶ್ರೀಗಳು, ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ ನಿರಂತರ ಧರಣಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ ಮಾತನಾಡಿ, ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂಬುದನ್ನು ಹಿಂದಿನಿಂದಲೂ ಎಲ್ಲಾ ಸರ್ಕಾರಗಳಿಗೆ ಮನವರಿಕೆ ಮಾಡುತ್ತಲೇ ಬಂದಿದ್ದೇವೆ. ಹಿಂದಿನ ಹಾಗೂ ಇಂದಿನ ಸರ್ಕಾರಕ್ಕೂ ಹಲವು ಸಲ ಮನವಿ ಮಾಡಿದೇªವೆ. ಆದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದರು....

ಫೋಟೋ - http://v.duta.us/LatDdgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/YyFnvwAA

📲 Get Karnatakanews on Whatsapp 💬