ಹುಕ್ಕೇರಿ-ಸಂಕೇಶ್ವರದಲ್ಲಿ ಅಂಬೇಡ್ಕರ್‌ ಪ್ರತಿಮೆ ಸ್ಥಾಪಿಸಿ

  |   Belgaumnews

ಹುಕ್ಕೇರಿ: ಹುಕ್ಕೇರಿ ಹಾಗೂ ಸಂಕೇಶ್ವರ ಪಟ್ಟಣಗಳಲ್ಲಿ ಡಾ| ಬಾಬಾಸಾಹೇಬ ಅಂಬೇಡ್ಕರರ ಪ್ರತಿಮೆ ಸ್ಥಾಪಿಸಲು 15 ದಿನದೊಳಗೆ ನಿರ್ಣಯ ಕೈಗೊಳ್ಳುವಂತೆ ಡಾ|ಬಿ.ಆರ್‌. ಅಂಬೇಡ್ಕರ್‌ ಜನಜಾಗೃತಿ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.

ಹುಕ್ಕೇರಿ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ರವಿವಾರ ಸಭೆ ನಡೆಸಿದ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರು, ಒಂದು ವೇಳೆ ಈ ಕಾರ್ಯ ವಿಳಂಬವಾದರೆ ತಿಂಗಳಾಂತ್ಯದಲ್ಲಿ ಸಂಕೇಶ್ವರ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹುಕ್ಕೇರಿ ಮತ್ತು ಸಂಕೇಶ್ವರ ಪಟ್ಟಣಗಳಲ್ಲಿ ಡಾ| ಬಾಬಾಸಾಹೇಬ ಅಂಬೇಡ್ಕರ ಪ್ರತಿಮೆ ನಿರ್ಮಿಸಬೇಕೆಂದು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದರೆ ಈ ಸಲ ಎರಡು ಪಟ್ಟಣಗಳಲ್ಲಿ ಅಂಬೇಡ್ಕರ್‌ ಪ್ರತಿಮೆ ಸ್ಥಾಪಿಸಲು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದು ಅನಿವಾರ್ಯ ಎಂದು ಗುಡುಗಿದ್ದಾರೆ.

ಬಹುತೇಕ ಹಳ್ಳಿಗಳ ಪಜಾ-ಪಪಂ ಸಮುದಾಯಗಳಿಗೆ ಸ್ಮಶಾನ ಭೂಮಿ ಇಲ್ಲದಿರುವುದರಿಂದ ಅಂತ್ಯಕ್ರಿಯೆ ವೇಳೆ ಸಾಕಷ್ಟು ತೊಂದರೆಯಾಗುತ್ತಿದ್ದು ಅಂಥ ಹಳ್ಳಿಗಳಿಗೆ ಕೂಡಲೇ ಸ್ಮಶಾನ ಭೂಮಿ ಮಂಜೂರು ಮಾಡಬೇಕು. ತಾಲೂಕಿನ ವಿವಿಧ ಇಲಾಖೆಗಳ ಕಾಮಗಾರಿಗಳಲ್ಲಿ ಪಜಾ ಹಾಗೂ ಪಪಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರದ ನಿರ್ದೇಶನದಂತೆ ಕೆಲಸ ನೀಡಬೇಕು ಎಂದು ಆಗ್ರಹಿಸಿದರು....

ಫೋಟೋ - http://v.duta.us/V1qoFAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/MJ8CVwAA

📲 Get Belgaum News on Whatsapp 💬