ಎಸಿಬಿ ದಾಳಿ: ಕೋಟ್ಯಂತರ ರೂ.ಮೌಲ್ಯದ ಆಸ್ತಿ ಪತ್ತೆ

  |   Bangalore-Citynews

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ಆರೋಪಿತ ಅಧಿಕಾರಿಗಳ ಕೋಟ್ಯಂತರ ರೂ.ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.

ಶಾಂತಿನಗರ ಟಿ.ಟಿ.ಎಂ.ಸಿಯ ವಿಭಾಗೀಯ ಸರಕು ಮತ್ತು ಸೇವಾ ಕಚೇರಿಯ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ ಎಂ.ಬಿ. ನಾರಾಯಣಸ್ವಾಮಿ, ರಾಮನಗರ ಜಿಲ್ಲೆಯ ಬೆಂಗಳೂರು ಮಿಲ್ಕ್ ಯೂನಿಯನ್‌ನ (ಬಮೂಲ್‌) ಉಪವ್ಯವಸ್ಥಾಪಕ ಡಾ.ಶಿವಶಂಕರ್‌, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಉಪ ವಿಭಾಗದ ಪಂಚಾಯತ್‌ ರಾಜ್‌ ಇಲಾಖೆಯ ಸಹಾಯಕ ಅಭಿಯಂತರ ಆರ್ಷದ್‌ ಪಾಷಾ

ಹಾಗೂ ಹಾಸನ ಲೋಕೋಪಯೋಗಿ ಇಲಾಖೆಯ ವಿಶೇಷ ವಿಭಾಗದ ಸಹಾಯಕ ಅಭಿಯಂತರ ಎಚ್‌.ಎಸ್‌ ಚೆನ್ನೇಗೌಡ ಅವರಿಗೆ 14 ಕಡೆಗಳಲ್ಲಿ ದಾಳಿ ಶುಕ್ರವಾರ ದಾಳಿ ನಡೆಸಲಾಗಿತ್ತು. ಈ ವೇಳೆ ಕೆಲ ಅಕ್ರಮ ಆಸ್ತಿಗೆ ಸಂಬಂಧಿಸಿದ ದಾಖಲೆ ಹಾಗೂ ಇತರೆ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ಎಸಿಬಿ ತಿಳಿಸಿದೆ.

ಬಮೂಲ್‌ ಉಪವ್ಯವಸ್ಥಾಪಕ ಡಾ.ಶಿವಶಂಕರ್‌, ತಮ್ಮ ಮತ್ತು ಕುಟುಂಬಸ್ಥರ ಹೆಸರಿನಲ್ಲಿ ರಾಮನಗರದಲ್ಲಿ ಮೂರು ಅಂತಸ್ತಿನ ಮನೆ, ಮೂರು ನಿವೇಶನ, ಯಲಹಂಕದಲ್ಲಿ ಒಂದು ನಿವೇಶನ, ದೊಡ್ಡಬಳ್ಳಾಪುರದ ಲಕ್ಷ್ಮೀದೇವಿಪುರದಲ್ಲಿ ಎರಡು ಎಕರೆ 16 ಗುಂಟೆ ಕೃಷಿ ಜಮೀನು, 530 ಗ್ರಾಂ ಚಿನ್ನ, ಒಂದು ಕಾರು, ಒಂದು ದ್ವಿಚಕ್ರ ವಾಹನ, 30.60 ಲಕ್ಷರೂ. ಬ್ಯಾಂಕ್‌ನಲ್ಲಿ ನಿಶ್ಚಿತ ಠೇವಣಿಗಳು ಮತ್ತು ಐದು ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಹೊಂದಿದ್ದಾರೆ....

ಫೋಟೋ - http://v.duta.us/tZR2YgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/rvulfQAA

📲 Get Bangalore City News on Whatsapp 💬