ಕಾರ್ಮಿಕರ ವ್ಯವಸ್ಥಿತ ಶೋಷಣೆ

  |   Raichurnews

ಗೊರೇಬಾಳ: ವಿವಿಧ ಕೈಗಾರಿಕೆಗಳು, ಸಾರ್ವಜನಿಕ ವಲಯಗಳು, ರೈತರು, ಕೃಷಿ ಕಾರ್ಮಿಕರು ಸೇರಿದಂತೆ ಹಲವು ಕ್ಷೇತ್ರದಲ್ಲಿ ಸಂಪತ್ತು ಸೃಷ್ಟಿ ಮಾಡುವ ಶ್ರಮಿಕರನ್ನು ವ್ಯವಸ್ಥಿತವಾಗಿ ಶೋಷಿಸಲಾಗುತ್ತಿದೆ ಎಂದು ಭಾರತ ಕಮ್ಯುನಿಸ್ಟ ಪಕ್ಷದ ರಾಜ್ಯ ಘಟಕ ಸಹ ಕಾರ್ಯದರ್ಶಿ ಡಾ| ಜನಾರ್ದನ ಅಭಿಪ್ರಾಯಪಟ್ಟರು.

ತಾಲೂಕಿನ ದಢೇಸುಗೂರು ಗ್ರಾಮದಲ್ಲಿ ಎಐಟಿಯುಸಿ ಜಿಲ್ಲಾ ಘಟಕದಿಂದ ಶನಿವಾರ ಹಮ್ಮಿಕೊಂಡಿದ್ದ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರದಲ್ಲಿ ಐದು ವರ್ಷ ಆಡಳಿತ ನಿರ್ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಐದಾರು ದಶಕಗಳ ಕಾಲ ಹೋರಾಡಿ ಪಡೆದ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಶ್ರಮಿಕ ವರ್ಗಕ್ಕೆ ಅನ್ಯಾಯ ಮಾಡಿದ್ದಾರೆ. ಈಗ ಪುನಃ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಸರ್ಕಾರದಿಂದ ದುಡಿಯುವ ಜನರ ಮೇಲೆ ಸರಣಿ ಪ್ರಹಾರಗಳು ನಡೆಯಲಿವೆ. ಆದ್ದರಿಂದ ಕಾರ್ಮಿಕರು, ರೈತರು, ಮಹಿಳೆಯರು, ವಿದ್ಯಾರ್ಥಿ-ಯುವಜನರು ಐಕ್ಯತೆಯಿಂದ ಹೋರಾಟಕ್ಕೆ ಸಿದ್ಧರಾಗಬೇಕಾಗಿದೆ ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾರ್ಮಿಕ ಮುಖಂಡ ಇಸ್ಮಾಯಿಲ್ ಮಾತನಾಡಿ, ಕಾರ್ಮಿಕರು ಆತ್ಮವಿಶ್ವಾಸದಿಂದ ಹೋರಾಡಿದರೆ ಉದ್ದೇಶಿತ ಗುರಿ ಮಟ್ಟುವುದರಲ್ಲಿ ಅನುಮಾನವಿಲ್ಲ. ವಿನಾಕಾರಣ ಸೇವೆಯಿಂದ ಅಮಾನ್ಯಗೊಳಿಸಿದ ಹಟ್ಟಿ ಚಿನ್ನದಗಣಿ ಕಾರ್ಮಿಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕಾನೂನುಬದ್ಧವಾಗಿ ಹೋರಾಡುವ ಮೂಲಕ ನ್ಯಾಯ ಪಡೆದ ಸಂಗತಿಯನ್ನು ಉದಾಹರಿಸಿದರು....

ಫೋಟೋ - http://v.duta.us/vMR0dgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/k9dtmAAA

📲 Get Raichur News on Whatsapp 💬