ಕಲಾಕ್ಷೇತ್ರದ ದುರಸ್ತಿಗೆ ಕ್ರಿಯಾಯೋಜನೆ

  |   Hassannews

ಹಾಸನ: ದುಸ್ಥಿತಿಯಲ್ಲಿರುವ ನಗರದ ಹಾಸನಾಂಬ ಕಲಾಕ್ಷೇತ್ರದ ದುರಸ್ತಿಗೆ 4.5 ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುದಾನ ಬಿಡುಗಡೆಗೆ ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶನಾಲಯಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಹೇಳಿದರು.

ಜಿಲ್ಲಾ ವಕೀಲರ ಸಂಘವು ಹಮ್ಮಿಕೊಂಡಿದ್ದ ಆಡಳಿತ ಸುಧಾರಣೆ ಕುರಿತು ಸಂವಾದ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಶೇಖರ್‌ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು, ಕಲಾಕ್ಷೇತ್ರದ ದುರಸ್ತಿಗೆ ಅನುದಾನ ಮಂಜೂರಾತಿಗೆ ಸಂಬಂಧಪಟ್ಟ ಅಧಿಕಾರಿಯವರನ್ನು ಸಂಪರ್ಕಿಸಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನ್ಯಾಯಾಂಗ ಇಲಾಖೆಗೆ ಸಹಕಾರ: ಜಿಲ್ಲಾಡಳಿತವು ನ್ಯಾಯಾಂಗ ಇಲಾಖೆಗೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಆಡಳಿತ ವ್ಯವಸ್ಥೆ ಸುಧಾರಣೆ ಗೆ ಹಲವು ರಚನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೌತಿಖಾತೆ ಆಂದೋಲನದ ಮೂಲಕ ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಮುಂದೆಯೂ ಎಲ್ಲ ತಾಲೂಕು ಹೋಬಳಿಗಳಲ್ಲಿ ಪೌತಿ ಖಾತೆ ಆಂದೋಲನ, ಜನ ಸಂಪರ್ಕ ಸಭೆಗಳನ್ನು ನಡೆಸಲಾಗುವುದು ಜಿಲ್ಲಾಧಿಕಾರಿಯವರು ತಿಳಿಸಿದರು.

ಗ್ರಾಮ ವಾಸ್ತವ್ಯಕ್ಕೆ ಮೆಚ್ಚುಗೆ: ವಕೀಲರ ಸಂಘದ ಅಧ್ಯಕ್ಷ ಶೇಖರ್‌ ಹಾಗೂ ಪದಾಧಿಕಾರಿಗಳು ಜಿಲ್ಲಾಧಿಕಾರಿ ಜೆ.ಸಿ.ಪುರದಲ್ಲಿ ಮಾಡಿದ ಗ್ರಾಮ ವಾಸ್ತವ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಕ್ರಮಗಳಿಂದ ಗ್ರಾಮೀಣ ಜನರ ಹಲವು ಸಂಕಷ್ಟ ಗಳು ಸುಲಭವಾಗಿ ಬಗೆಹರಿಯಲಿದ್ದು ಜಿಲ್ಲಾಡಳಿತದ ಕ್ರಮ ಅಭಿನಂದನಾರ್ಹ ಎಂದರು....

ಫೋಟೋ - http://v.duta.us/gsku3QAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/k7TWiAAA

📲 Get Hassan News on Whatsapp 💬