ಗ್ರಾಮ ವಾಸ್ತವ್ಯದ ಪರಿಕಲ್ಪನೆ ಕೊಟ್ಟವರು ನಾಲ್ವಡಿ ಕೃಷ್ಣರಾಜ ಒಡೆಯರ್‌

  |   Mysorenews

ಮೈಸೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ಹೇಳಿ ಹೋಗುತ್ತಾರೆ. ಆದರೆ, ಯಾರಿಗೂ ಹೇಳದೆ ಮಾರುವೇಷದಲ್ಲಿ ಗ್ರಾಮಗಳಿಗೆ ಹೋಗುತ್ತಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಅಂದೇ ಗ್ರಾಮ ವಾಸ್ತವ್ಯದ ಪರಿಕಲ್ಪನೆ ನೀಡಿದ್ದರು ಎಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದರು.

ಮೈಸೂರು ಕನ್ನಡ ವೇದಿಕೆ ಮತ್ತು ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಹಾಗೂ ಸಾಧಕರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಭಿವೃದ್ಧಿ ಕ್ರಾಂತಿ: ನಾಲ್ವಡಿ ಕೃಷ್ಣರಾಜ ಒಡೆಯರ್‌ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದವರು. ಅನೇಕ ಪ್ರಥಮಗಳಿಗೆ ಅಡಿಗಲ್ಲಿಟ್ಟವರು. ದೇಶದಲ್ಲಿ ಅನೇಕ ಸಂಸ್ಥಾನಗಳು ಆಳ್ವಿಕೆ ನಡೆಸಿವೆ. ಮೈಸೂರು ಸಂಸ್ಥಾನವನ್ನು 25 ಅರಸರು ಆಳಿದ್ದಾರೆ. ಆದರೆ, ಅಭಿವೃದ್ಧಿಯಲ್ಲಿ ಸಿಂಹಪಾಲು ನಾಲ್ವಡಿಯವರಿಗೆ ಸಲ್ಲುತ್ತದೆ.

ಸಂಸ್ಥಾನದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ ಕೀರ್ತಿ ಅವರಿಗೆ ಸಲ್ಲಬೇಕು. ಅಲ್ಲದೇ, ಅಂದಿನ ಕಾಲದಲ್ಲೇ ಮಾರುವೇಷದಲ್ಲಿ ತೆರಳಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಅವರ ಗ್ರಾಮ ವಾಸ್ತವ್ಯದ ಫ‌ಲವೇ ಕನ್ನಂಬಾಡಿ ಅಣೆಕಟ್ಟೆ ಎಂದರು....

ಫೋಟೋ - http://v.duta.us/LlS23gAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/XgvICgAA

📲 Get Mysore News on Whatsapp 💬