ಜೆಡಿಎಸ್‌ನೊಂದಿಗಿನ ಮೈತ್ರಿಯೇ ಪ್ರಮಾದ

  |   Bangalore-Ruralnews

ದೇವನಹಳ್ಳಿ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೇ ಪಕ್ಷದ ಸೋಲಿಗೆ ಕಾರಣವಾಯಿತು. ಮುಂಬರುವ ಚುನಾವಣೆಗಳಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಂ.ವೀರಪ್ಪಮೊಯ್ಲಿ ಹೇಳಿದರು. ನಗರದ ಪ್ರವಾಸಿಮಂದಿರದಲ್ಲಿ ಲೋಕಸಭೆ ಚುನಾವಣೆ ಬಳಿಕ ಮೊದಲ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಮುಂಬರುವ ಚುನಾವಣೆಗಳಲ್ಲಿ ಮೈತ್ರಿ ಬೇಡ: ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 10 ಸ್ಥಾನ ಗೆದ್ದಿದೆ. ಆದರೆ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಬೇಡ. ಜೆಡಿಎಸ್‌ನಿಂದ ಬಹಳಷ್ಟು ಪಾಠ ಕಲಿತಿದ್ದೇವೆ. ನಾವು ಸೋತಿದ್ದೇವೆ ಎಂದು ಕಾರ್ಯಕರ್ತರು ಧೃತಿಗೆಡುವುದು ಬೇಡ. ನಾನು ನಿಮ್ಮೊಂದಿಗಿದ್ದೇನೆ. ಏನೇ ಸಮಸ್ಯೆ ಇದ್ದರೂ ಬಗೆಹರಿಸುತ್ತೇನೆ.

ಪಕ್ಷವನ್ನು ಪುನಃ ತಳಮಟ್ಟದಿಂದ ಸಂಘಟಿಸಬೇಕು. ಮುಂದಿನ ಗ್ರಾಪಂ, ಜಿಪಂ, ತಾಪಂ ಚುನಾವಣೆಗಳಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಏಕಾಂಗಿಯಾಗಿ ಕಾಂಗ್ರೆಸ್‌ ಸ್ಪರ್ಧೆ ಮಾಡಲಿದೆ. ನಮ್ಮ ಕಾರ್ಯಕರ್ತರು ಪ್ರತಿಯೊಂದು ಚುನಾವಣೆಯಲ್ಲಿ ಸದಸ್ಯರಾದರೆ ನಮಗೆ ಖುಷಿಯಾಗುತ್ತದೆ. ಅದಕ್ಕಾಗಿ ಮೈತ್ರಿ ಮಾಡಿಕೊಂಡರೆ ಏನೆಲ್ಲ ತೊಂದರೆಯಾಗುತ್ತದೆ ಎಂಬುವುದು ನಮಗೆ ತಿಳಿದಿದೆ ಎಂದು ಹೇಳಿದರು.

ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರಿಂದ ಗೆಲುವು: ಕಳೆದ ತಿಂಗಳು ನಡೆದ ಪುರಸಭೆ ಚುನಾವಣೆಯಲ್ಲಿ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಇಲ್ಲದೆ ನೆಲಮಂಗಲ, ಬಾಗೆಪಲ್ಲಿ, ಶಿಡ್ಲಗಟ್ಟ ದೇವನಹಳ್ಳಿ ನಮ್ಮ ಪಕ್ಷಕ್ಕೆ ಹೆಚ್ಚು ಸ್ಥಾನಗಳು ದೊರೆತಿವೆ. ಒಂದೇ ತಿಂಗಳಲ್ಲಿ ಇಷ್ಟು ಬದಲಾವಣೆ ಹೇಗೆ ಸಾಧ್ಯವಾಯಿತು. ಸ್ವತಂತ್ರವಾಗಿ ಚುನವಣೆ ಎದುರಿಸಿದ್ದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದಾರೆ. ದೇವನಹಳ್ಳಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಯಾವ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ....

ಫೋಟೋ - http://v.duta.us/CwMbTAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/fGhcLgAA

📲 Get Bangalore Rural News on Whatsapp 💬