ನೀರಿನ ಸಮಸ್ಯೆ ಇತ್ಯರ್ಥಕ್ಕೆ ಮಹಾರಾಷ್ಟ್ರ ಜತೆ ಶೀಘ್ರವೇ ಮಾತುಕತೆ: ಡಿ.ಕೆ.ಶಿವಕುಮಾರ

  |   Karnatakanews

ಬೆಳಗಾವಿ: ಗಡಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆಗೆ ಇತಿಶ್ರೀ ಹಾಡಲು ಹಾಗೂ ಶಾಶ್ವತ ಪರಿಹಾರ ಕಲ್ಪಿಸಲು ಸದ್ಯದ ಸ್ಥಿತಿಯ ಮಾಹಿತಿ ಪಡೆದುಕೊಂಡು ಬಳಿಕ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರ ಜತೆ ಶೀಘ್ರವೇ ಮಾತುಕತೆ ನಡೆಸಿ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್‌ಗೆ ಶನಿವಾರ ಭೇಟಿ ನೀಡಿದ ಸಚಿವರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿ, ಈ ಭಾಗದಲ್ಲಿ ಬೇಸಿಗೆಯಲ್ಲಿ ನೀರಿನ ವಿಪರೀತ ಸಮಸ್ಯೆ ತಲೆದೋರಿದೆ. ಅನೇಕ ಸಲ ಮನವಿ ಮಾಡಿದರೂ ಮಹಾರಾಷ್ಟ್ರ ಸರ್ಕಾರ ನೀರು ಬಿಟ್ಟಿಲ್ಲ. ಇಷ್ಟು ವರ್ಷಗಳ ಕಾಲ ಹಣ ಕೊಟ್ಟು ನೀರು ಪಡೆಯಲಾಗುತ್ತಿತ್ತು. ಈಗ ನೀರಿಗೆ ನೀರು ಬೇಕು ಎಂಬ ಬೇಡಿಕೆ ಇಟ್ಟಿದ್ದರಿಂದ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಕೃಷ್ಣಾ ನದಿಗೆ ನೀರು ಬಿಡುಗಡೆ ವಿಚಾರದಲ್ಲಿ ಯಾವುದೇ ರೀತಿಯ ರಾಜಕೀಯ ಇಲ್ಲ. ಮಹಾರಾಷ್ಟ್ರದಲ್ಲಿ ಮಳೆ ಆಗಿರುವುದರಿಂದ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದೆ. ಇಷ್ಟೇ ಪ್ರಮಾಣದಲ್ಲಿ ನೀರು ಬಂದಿದೆ ಎಂಬ ಬಗ್ಗೆ ಸರ್ಕಾರದ ಬಳಿ ಅಂಕಿ-ಅಂಶ ಇಲ್ಲ. ಪ್ರತಿ ವರ್ಷ ಬೇಸಿಗೆಯ ಸಂದರ್ಭ ತಲೆದೋರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗುವುದು. ಎರಡೂ ರಾಜ್ಯಗಳಲ್ಲಿ ಕುಡಿಯುವ ನೀರು ಮತ್ತು ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಿದೆ ಎಂದರು....

ಫೋಟೋ - http://v.duta.us/VnoC6wAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/RUL5ggAA

📲 Get Karnatakanews on Whatsapp 💬