ನಾಲೆಗೆ ನೀರು ಹರಿಸುವ ವಿಚಾರದಲ್ಲಿ ಸಡಿಲಿಸದ ಪಟ್ಟು

  |   Mandyanews

ಮಂಡ್ಯ: ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ಕೆಆರ್‌ಎಸ್‌ ಹಾಗೂ ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘದ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿ ಪ್ರವೇಶ ದ್ವಾರದ ಬಳಿ ಪ್ರತಿಭಟಿಸುತ್ತಿರುವ ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಾಲೆಗೆ ನೀರು ಹರಿಸುವ ವಿಚಾರದಲ್ಲಿ ಹಿಡಿದಿರುವ ಪಟ್ಟನ್ನು ಸಡಿಲಿಸದೆ ಅಧಿಕಾರಿಗಳ ಮನವೊಲಿಕೆಗೂ ಮಣಿಯದೆ ಧರಣಿ ಮುಂದುವರಿಸಿದ್ದಾರೆ.

ಜಮೀನುಗಳಲ್ಲಿ ಒಣಗುತ್ತಿರುವ ಬೆಳೆಯನ್ನು ಉಳಿಸಿಕೊಳ್ಳಲು ಕೆಆರ್‌ಎಸ್‌ ಮತ್ತು ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ತಕ್ಷಣವೇ ನೀರು ಹರಿಸಬೇಕು. ನಿರಂತರ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ರೈತರು ಸಾಲ ಮಾಡಿ ಬೆಳೆ ಬೆಳೆದಿದ್ದಾರೆ. ಇದೀಗ ಸುಮಾರು 34 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದು ನಿಂತಿರುವ ಕಬ್ಬಿಗೆ ನೀರಿನ ಅವಶ್ಯಕತೆ ಇದೆ. ಇದು ಸರ್ಕಾರ ಮತ್ತು ಅಧಿಕಾರಿಗಳಿಗೆ ಅರ್ಥವಾಗದೆ ರೈತರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ದೂರಿದರು.

ಕಾರ್ಖಾನೆಗಳಿಂದ ರೈತ ವಿರೋಧಿ ನೀತಿ: ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಪೂರೈಸಿ ಆರು ತಿಂಗಳಾದರೂ ಹಣ ಪಾವತಿಸಿಲ್ಲ. ಕಬ್ಬಿನ ಬಾಕಿ ಪಾವತಿ ಮಾಡದೆ ಕಾರ್ಖಾನೆ ಆಡಳಿತ ಮಂಡಳಿ ಬೇಜವಾಬ್ದಾರಿತನ ಪ್ರದರ್ಶಿಸಿವೆ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿ ಶೀಘ್ರ ಬಾಕಿ ಹಣ ಪಾವತಿಸುವಂತೆ ಎಚ್ಚರಿಕೆ ನೀಡಿದ್ದರೂ ಹಣ ಕೊಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಟೀಕಿಸಿದರು....

ಫೋಟೋ - http://v.duta.us/7_RnWwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/C9V1RgAA

📲 Get Mandya News on Whatsapp 💬