ಪೋಷಕರು ಖಾಸಗಿ ವ್ಯಾಮೋಹ ಬಿಡಲಿ

  |   Bangalore-Ruralnews

ದೇವನಹಳ್ಳಿ: ಗ್ರಾಮೀಣ ಪ್ರದೇಶದ ಕಟ್ಟಕಡೆಯ ಮಗುವಿಗೂ ಸಹ ಗುಣಮಟ್ಟದ ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದಲೇ ಸರ್ಕಾರ ಈ ಯೋಜನೆ ಕೈಗೊಂಡಿದೆ. ಪೊಷಕರು ಇನ್ನಾದರೂ ಖಾಸಗಿ ವ್ಯಾಮೋಹ ಬಿಟ್ಟು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದು ಶಾಸಕ ಎಲ್‌.ಎನ್‌. ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಕಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ ಮತ್ತು ಕಾರಹಳ್ಳಿ ಗ್ರಾಪಂನಿಂದ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್‌ಬುಕ್‌ ವಿತರಿಸಿ ಮಾತನಾಡಿದರು.

ದೂರದೃಷ್ಟಿಯಿಂದ ಇಂಗ್ಲಿಷ ಮಾಧ್ಯಮ ಆರಂಭ: ಪೋಷಕರು ತಮ್ಮ ಮಕ್ಕಳನ್ನು ಇಂಗ್ಲಿಷ್‌ ಮಾಧ್ಯಮದಲ್ಲಿ ಓದಿಸಲು ಭಾರೀ ಪ್ರಮಾಣದ ಶುಲ್ಕ, ಡೊನೇಷನ್‌ ಹಾವಳಿಗೆ ಸಿಲುಕಿ ಸಂಕಷ್ಟ ಎದುರಿಸುತ್ತಾರೆ. ಪೋಷಕರ ಇಂತಹ ಸಂಕಷ್ಟವನ್ನು ತಪ್ಪಿಸುವುದಕ್ಕೋಸ್ಕರ ಹಾಗೂ ಬಡಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯುವುದಕ್ಕಾಗಿ ಸಿಎಂ ಕುಮಾರಸ್ವಾಮಿ ಈ ಯೋಜನೆ ಜಾರಿಗೊಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳು ಸಹ ಇಂಗ್ಲೀಷ್‌ ಕಲಿತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಂತೆ ಆಗಬೇಕು ಎಂಬ ದೂರದೃಷ್ಟಿಯಿದೆ ಎಂದು ಹೇಳಿದರು....

ಫೋಟೋ - http://v.duta.us/F61VNwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/fXqzjwAA

📲 Get Bangalore Rural News on Whatsapp 💬