ಬೇಡವಾಗಿತ್ತು ಮೈತ್ರಿ

  |   Karnatakanews

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಗ್ಗೆ ಮತ್ತೆ ಕೆದಕಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ , ಮೈತ್ರಿ ನಂಬಿ ನಾವೆಲ್ಲಾ ಕೆಟ್ಟು ಹೋದೆವು. ಈ ಮೈತ್ರಿ ಸರ್ಕಾರದ ಬಗ್ಗೆ ರಾಜ್ಯದ ಮತದಾರರಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ ಎಂದು ಬಾಂಬ್‌ ಸಿಡಿಸಿದ್ದಾರೆ.

ಅಷ್ಟೇ ಅಲ್ಲದೆ, ರಾಜ್ಯದ ಯಾವ ಕ್ಷೇತ್ರದಲ್ಲೂ ಮೈತ್ರಿ ಕೆಲಸ ಮಾಡಲಿಲ್ಲ. ಈ ಕಾರಣಕ್ಕಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿತು. ರಾಜ್ಯದಲ್ಲಿ ಅಧಿಕಾರ ಹಂಚಿಕೆ, ನೇಮಕಾತಿಗಳಲ್ಲಿ ನಾಯಕರು ಮೇಲುಗೈ ಸಾಧಿಸಿದರೆ ಸಾಲದು, ಕಾರ್ಯಕರ್ತರು ಮೇಲುಗೈ ಸಾಧಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಎಷ್ಟು ದಿನ ಇರುತ್ತೋ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿ, ಅವರು ಒಂದೊಂದು ದಿನ ಒಂದೊಂದು ಹೇಳಿಕೆ ನೀಡುತ್ತಾರೆ. ಅವರ ಬಗ್ಗೆ ಏನೂ ಹೇಳಲಿಕ್ಕೆ ಆಗುವುದಿಲ್ಲ. ನಾವು ಏನಾದರೂ ಹೇಳಿಕೆ ನೀಡಿದರೆ ಅದಕ್ಕೆ ಬದ್ಧರಾಗಿರುತ್ತೇವೆ. ಆದರೆ ಅವರು ಸಮಯ, ಸಂದರ್ಭ ನೋಡಿ ಹೇಳಿಕೆ ಕೊಡುತ್ತಾರೆ. ಅವರು ದೊಡ್ಡವರು ಎಂದು ತಿಳಿಸಿದ್ದಾರೆ.

ಗರಿಗೆದರಿದ ರಾಜಕೀಯ ಚಟುವಟಿಕೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಧ್ಯಂತರ ಚುನಾವಣೆ ‘ಬಾಂಬ್‌’ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಶನಿವಾರವೂ ಚಟುವಟಿಕೆಗಳು ಗರಿಗೆದರಿದ್ದವು....

ಫೋಟೋ - http://v.duta.us/g_-tXQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/IBOP1QAA

📲 Get Karnatakanews on Whatsapp 💬