ಭಾಲ್ಕಿ: ಸಾಹಿತ್ಯ ಸಮ್ಮೇಳನ ಭಿತ್ತಿಪತ್ರ ಬಿಡುಗಡೆ

  |   Bidarnews

ಭಾಲ್ಕಿ: ಜೂ.28ರಂದು ಪಟ್ಟಣದಲ್ಲಿ ನಡೆಯಲಿರುವ 5ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಭಿತ್ತಿಪತ್ರವನ್ನು ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಈಶ್ವರ ಖಂಡ್ರೆ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಸಮ್ಮೇಳನ ಆರಂಭಕ್ಕೆ ದಿನಗಣನೆ ಆರಂಭಗೊಂಡಿದೆ. ಒಂದು ದಿನದ ಸಮ್ಮೇಳನವನ್ನು ಕನ್ನಡದ ಹಬ್ಬವನ್ನಾಗಿ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲ ಸಮಿತಿಯವರು ಸಮ್ಮೇಳನ ಯಶಸ್ವಿಗೆ ದುಡಿಯುತ್ತಿದ್ದಾರೆ. ಅಂದು ನಡೆಯುವ ಕನ್ನಡ ಹಬ್ಬದಲ್ಲಿ ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ನಾನಾ ಸಂಘ-ಸಂಸ್ಥೆಯ ಪ್ರಮುಖರು ಸೇರಿದಂತೆ ಎಲ್ಲರೂ ತಪ್ಪದೇ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ್ದ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಗಡಿ ಭಾಗದಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ತಂದಿದೆ. ಪ್ರತಿಯೊಬ್ಬ ಕನ್ನಡಗರು, ಸಾಹಿತ್ಯಾಭಿಮಾನಿಗಳು ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿ, ಪಟ್ಟಣದಲ್ಲಿ ಐತಿಹಾಸಿಕವಾಗಿ ಸಮ್ಮೇಳನ ನಡೆಸಲು ಅಗತ್ಯ ಸಿದ್ಧತೆ ನಡೆದಿದೆ. ಸಮ್ಮೇಳನದ ದಿನದಂದು ಎಲ್ಲ ಸರಕಾರಿ ನೌಕರರಿಗೆ ಒಒಡಿ ಸೌಲಭ್ಯವಿದ್ದು, ಶಿಕ್ಷಕರು ಸೇರಿದಂತೆ ಎಲ್ಲ ಸರಕಾರಿ ನೌಕರರು ತಪ್ಪದೇ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದರು. ಶ್ರೀ ಗುರುಬಸವ ಪಟ್ಟದ್ದೇವರು, ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಗೌರವ ಕಾರ್ಯದರ್ಶಿ ರಮೇಶ ಚಿದ್ರಿ, ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ ಪ್ರಭು ಡಿಗ್ಗೆ, ಉದ್ಯಮಿ ಬಸವರಾಜ ಧನ್ನೂರು, ಪುರಸಭೆ ಸದಸ್ಯ ಬಸವರಾಜ ವಂಕೆ, ಪ್ರಭು ಡಿಗ್ಗೆ, ಕಾಶೀನಾಥ ಲದ್ದೆ, ಮೋಹನ ರೆಡ್ಡಿ ಹಾಗೂ ಹಲವರಿದ್ದರು.

ಫೋಟೋ - http://v.duta.us/-NhScwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/ozo00QAA

📲 Get Bidar News on Whatsapp 💬